
ಬೆಂಗಳೂರು: ರಾಜ್ಯದಲ್ಲಿ ಕೋಮುವಾದಿ ಶಕ್ತಿಗಳು ಸಾಮರಸ್ಯ ಕದಡುವ ಪ್ರಯತ್ನ ನಡೆಸುತ್ತಿವೆ. ಅಂತಹ ಶಕ್ತಿಗಳನ್ನು ಹತ್ತಿಕ್ಕಲು ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು.
ವಿಧಾನಸೌಧದಲ್ಲಿ ಏರ್ಪಡಿಸಿದ್ದ ಧಾರ್ಮಿಕ, ಭಾಷಾ ಅಲ್ಪಸಂಖ್ಯಾತರ ಹಕ್ಕು ದಿನಾಚರಣೆಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಧಾರ್ಮಿಕ ಮತ್ತು ಭಾಷಾ ಅಲ್ಪಸಂಖ್ಯಾತರು ಆತಂಕ ಭಯದಿಂದ ಜೀವನ ನಡೆಸಬೇಕಿಲ್ಲ, ನಿರಾತಂಕ ವಾಗಿ ಜೀವನ ನಡೆಸಬಹುದು ಎಂದರು. ಸಮಾಜದ ಒಳಿತಿನ ಹಿತದೃಷ್ಠಿಯಿಂದ ಬಹು ಸಂಖ್ಯಾತರು, ಮತ್ತು ಅಲ್ಪ ಸಂಖ್ಯಾತರು, ಒಗ್ಗಟ್ಟಾಗಿ ಜೀವನ ನಡೆಸಿದಾಗ ದೇಶದ ಅಭಿವೃದ್ಧಿ ಸಾಧ್ಯ ಎಂದ ಅವರು, ಸಂವಿಧಾನದಲ್ಲಿ ಅಲ್ಪಸಂಖ್ಯಾತರಿಗೆ ರಕ್ಷಣೆ ಒದಗಿಸಿರುವಂತೆ ಎಲ್ಲ ಸರ್ಕಾರಗಳು ಈ ಸಮುದಾಯಗಳಿಗೆ ರಕ್ಷಣೆ ಒದಗಿಸುವುದು ಕರ್ತವ್ಯ ಎಂದರು.
ಸಚಿವ ಡಾ. ಖಮರುಲ್ ಇಸ್ಲಾಂ ಮಾತನಾಡಿ, ಅಲ್ಪಸಂಖ್ಯಾತರ ಆಯೋಗಕ್ಕೆ ನ್ಯಾಯಾಂಗ ಅಧಿಕಾರ ನೀಡಲು ಚಿಂತನೆ ನಡೆಸಲಾಗುತ್ತಿದೆ. ಮುಂದಿನ ಅಧಿವೇಶನದಲ್ಲಿ ಚರ್ಚೆಗೆ ಬರಲಿದ್ದು, ಶೀಘ್ರದಲ್ಲೇ ಆಯೋಗಕ್ಕೆ ನ್ಯಾಯಾಂಗ ಅಧಿಕಾರ ಸಿಗಲಿದೆ ಎಂದರು.
Advertisement