ಲಾರಿ ಡಿಕ್ಕಿ: ಮಹಿಳೆ ಸಾವು ಯುವತಿಗೆ ಗಂಭೀರ ಗಾಯ; ಆಸ್ಪತ್ರೆಗೆ ದಾಖಲು

ಕೆಐಎಡಿಬಿ ಮುಖ್ಯರಸ್ತೆಯ ಬಿ.ಕೆ.ಪಾಳ್ಯ ಗೇಟ್ ಬಳಿ ಸ್ಕೂಟಿಗೆ ಮರಳು ಲಾರಿ ಡಿಕ್ಕಿ ಹೊಡೆದ ಪರಿಣಾಮ ಮಹಿಳೆ ಮೃತಪಟ್ಟು, ಯುವತಿ ಗಂಭೀರವಾಗಿ ಗಾಯಗೊಂಡಿರುವ ....
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಬೆಂಗಳೂರು: ಕೆಐಎಡಿಬಿ ಮುಖ್ಯರಸ್ತೆಯ ಬಿ.ಕೆ.ಪಾಳ್ಯ ಗೇಟ್ ಬಳಿ ಸ್ಕೂಟಿಗೆ ಮರಳು ಲಾರಿ ಡಿಕ್ಕಿ ಹೊಡೆದ ಪರಿಣಾಮ ಮಹಿಳೆ ಮೃತಪಟ್ಟು, ಯುವತಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಭಾನುವಾರ ನಡೆದಿದೆ. ಹುಣಸೂರು ನಿವಾಸಿ ಜಯಂತಿ (38) ಮೃತಪಟ್ಟವರು. ಇವರ ಪುತ್ರಿ ಲಾವಣ್ಯ (18) ಗಂಭೀರವಾಗಿ ಗಾಯಗೊಂಡವರು.

ಖಾಸಗಿ ಕಂಪನಿ ಉದ್ಯೋಗಿಯಾಗಿರುವ ಜಯಂತಿ, ಬೆಳಗ್ಗೆ 9.30ರ ಸುಮಾರಿಗೆ ಮಗಳು ಲಾವಣ್ಯ ಅವರನ್ನು ಸ್ಕೂಟಿಯಲ್ಲಿ ಕೂರಿಸಿಕೊಂಡು ಕೆಐಎಡಿಬಿ ಮುಖ್ಯರಸ್ತೆಯಲ್ಲಿ ಬರುತ್ತಿದ್ದರು. ಈ ವೇಳೆ ಕೆ.ಬಿ.ಪಾಳ್ಯದ ಗೇಟ್‍ನಲ್ಲಿ ಹಿಂದಿನಿಂದ ಬಂದ ಮರಳು ಲಾರಿ, ಸ್ಕೂಟಿಗೆ ಡಿಕ್ಕಿ ಹೊಡೆದಿದೆ.

ಇದರಿಂದ ಜಯಂತಿ ಅವರ ತಲೆಗೆ ತೀವ್ರ ಪೆಟ್ಟು ಬಿದ್ದು, ಮೂಗು ಮತ್ತು ಕಿವಿಯಲ್ಲಿ ರಕ್ತಸ್ರಾವವಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗಂಭೀರವಾಗಿ ಗಾಯಗೊಂಡಿರುವ ಯುವತಿ ಲಾವಣ್ಯ ಅವರನ್ನು ಯಲಹಂಕದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದರು. ಚಾಲಕನ ನಿರ್ಲಕ್ಷ್ಯವೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಘಟನೆಯಿಂದ ಗಾಬರಿಗೊಂಡಿರುವ ಚಾಲಕ ಸ್ಥಳದಲ್ಲೇ ಲಾರಿ ಬಿಟ್ಟು ಪರಾರಿಯಾಗಿದ್ದೇನೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com