ಪರಿಸರ ಮಾಲಿನ್ಯ ನಿಯಂತ್ರಣ ಮಂಡಲಿಗೆ ಲಕ್ಷ್ಮಣ್ ಅಧ್ಯಕ್ಷ

ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷರಾಗಿ ಕನಕಪುರ ಮೂಲದ ಸಿವಿಲ್ ಎಂಜಿನಿಯರ್ ಲಕ್ಷ್ಮಣ್ ಸೋಮವಾರ ಅಧಿಕಾರ ಸ್ವೀಕರಿಸಿದರು...
ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ (ಸಂಗ್ರಹ ಚಿತ್ರ)
ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ (ಸಂಗ್ರಹ ಚಿತ್ರ)

ಬೆಂಗಳೂರು: ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷರಾಗಿ ಕನಕಪುರ ಮೂಲದ ಸಿವಿಲ್ ಎಂಜಿನಿಯರ್ ಲಕ್ಷ್ಮಣ್ ಸೋಮವಾರ ಅಧಿಕಾರ ಸ್ವೀಕರಿಸಿದರು.

ಸೋಮವಾರ ರಾತ್ರಿ 7.30ರ ಸುಮಾರಿಗೆ ಕಚೇರಿಗೆ ಆಗಮಿಸಿ ಲಕ್ಷ್ಮಣ್ ಅವರಿಗೆ ಪ್ರಭಾರ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದ ಸರ್ಕಾರದ ಪರಿಸರ ಇಲಾಖೆ ಕಾರ್ಯದರ್ಶಿ ರಾಮಚಂದ್ರ ಅಧಿಕಾರ ಹಸ್ತಾಂತರಿಸಿದರು. ಈ ಹಿಂದೆ ಅಧ್ಯಕ್ಷರಾಗಿದ್ದ ವಾಮನಾಚಾರ್ಯ ಅವರ ಅಧಿಕಾರಾವಧಿ ಮುಗಿದ ನಂತರ ಸರ್ಕಾರ ಅವರನ್ನು ಹಂಗಾಮಿ ಅಧ್ಯಕ್ಷರನ್ನಾಗಿ ಮುಂದುವರಿಸಿತ್ತು. ನಂತರ ಅವರು ಬೇರೆ ಕಾರ್ಯ ನಿಮಿತ್ತ ಈ ಹುದ್ದೆಯಿಂದ ಬಿಡುಗಡೆ ಹೊಂದಿದ ತರುವಾಯ ಸರ್ಕಾರದ ಕಾರ್ಯದರ್ಶಿಯವರಿಗೆ ಜವಾಬ್ದಾರಿವಹಿಸಿತ್ತು.

ಅಂದಾಜು 8 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿರುವ ಕನಕಪುರ ರೂರಲ್ ಕಾಲೇಜಿನಲ್ಲಿ ಕಳೆದ 3 ವರ್ಷಗಳಿಂದ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿ-ರುವ
ಲಕ್ಷ್ಮಣ್ ಅವರು ಕಲೆ, ಕ್ರೀಡೆ ಮತ್ತಿತರ ಸಮಾಜ ಸೇವೆಯಲ್ಲಿ ಗುರುತಿಸಿಕೊಂಡಿ-ರುವ ವಿವಿಧ ಸಂಘ ಸಂಸ್ಥೆಗಳಲ್ಲಿ ಪದಾಧಿಕಾರಿ ಸೇವೆ ಸಲ್ಲಿಸುತ್ತಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com