ಎಲ್‍ಕೆಜಿ-ಯುಕೆಜಿ ಮಕ್ಕಳಿಗೆ ಆರ್‍ಟಿಇ ಪ್ರವೇಶ ಇಲ್ಲ

ಪೂರ್ವ ಪ್ರಾಥಮಿಕ ಶಾಲಾ (ಎಲ್‍ಕೆಜಿ, ಯುಕೆಜಿ) ವಿದ್ಯಾರ್ಥಿಗಳಿಗೆ ಕಡ್ಡಾಯ ಶಿಕ್ಷಣ ಹಕ್ಕು ಕಾಯಿದೆ (ಆರ್‍ಟಿಇ) ಯಡಿ ಮುಂದಿನ ಶೈಕ್ಷಣಿಕ ವರ್ಷದಲ್ಲಿ ಪ್ರವೇಶ ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ಪೂರ್ವ ಪ್ರಾಥಮಿಕ ಶಾಲಾ (ಎಲ್‍ಕೆಜಿ, ಯುಕೆಜಿ) ವಿದ್ಯಾರ್ಥಿಗಳಿಗೆ ಕಡ್ಡಾಯ ಶಿಕ್ಷಣ ಹಕ್ಕು ಕಾಯಿದೆ (ಆರ್‍ಟಿಇ) ಯಡಿ ಮುಂದಿನ ಶೈಕ್ಷಣಿಕ ವರ್ಷದಲ್ಲಿ ಪ್ರವೇಶ ಕಲ್ಪಿಸದಂತೆ ಹೈಕೋರ್ಟ್ ಆದೇಶ ನೀಡಿದೆ.

ಎಲ್ ಕೆಜಿ ಮತ್ತು ಯುಕೆಜಿ ವಿದ್ಯಾರ್ಥಿಗಳು ಆರ್‍ಟಿಐ ವ್ಯಾಪ್ತಿಗೆ ಸೇರುವುದಿಲ್ಲ. ಆದರೆ, ರಾಜ್ಯ ಸರ್ಕಾರ ನಿಯಮ ಬಾಹಿರವಾಗಿ ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಒತ್ತಡ ಹೇರುತ್ತಿದೆ ಎಂದು ಆರೋಪಿಸಿ ಖಾಸಗಿ  ಆಂಗ್ಲ ಮಾಧ್ಯಮ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿ ಕೋರ್ಟ್ ಮೊರೆ ಹೋಗಿತ್ತು.

ಅರ್ಜಿಯ ವಿಚಾರಣೆ ನಡೆಸಿದ ನ್ಯಾ.ಆನಂದ ಭೈರಾರೆಡ್ಡಿ ಅವರಿದ್ದ ರಜಾಕಾಲದ ನ್ಯಾಯಪೀಠ ಈ ಆದೇಶ ನೀಡಿದೆ. ಅಲ್ಲದೆ, ಪ್ರತಿವಾದಿಗಳಾದ ರಾಜ್ಯ ಸರ್ಕಾರ ಮತ್ತು ಸಾರ್ವಜನಿಕ ಶಿಕ್ಷಣ ಇಲಾಖೆಗೆ ನೋಟೀಸ್ ಜಾರಿ ಮಾಡಿದೆ.

ಕಾನೂನಿನ ಪ್ರಕಾರ ಪೂರ್ವ ಪ್ರಾಥಮಿಕ ಶಾಲೆಯ ಮಕ್ಕಳು ಆರ್‍ಟಿಐ ವ್ಯಾಪ್ತಿಗೆ ಬರುವುದಿಲ್ಲ. ಕೇವಲ ಒಂದನೇ ತರಗತಿಯಿಂದ ಮಾತ್ರ ಆರ್‍ಟಿಇ ಅಡಿ ಪ್ರವೇಶ ಕಲ್ಪಿಸಬೇಕು. ಆದರೆ, ಶಿಕ್ಷಣ ಇಲಾಖೆ ಖಾಸಗಿ ಶಾಲೆಗಳ ಮೇಲೆ ವಿನಃಕಾರಣ ಒತ್ತಡ ಹೇರುತ್ತಿದ್ದು, ಪೂರ್ವ ಪ್ರಾಥಮಿಕ ತರಗತಿಗಳಿಗೆ ವಿದ್ಯಾರ್ಥಿಗಳನ್ನು ನೋಂದಾಯಿಸಿಕೊಳ್ಳುವಂತೆ ಸೂಚನೆ ನೀಡುತ್ತಿದೆ.

ಪ್ರಾಥಮಿಕ ಶಿಕ್ಷಣ ಪಡೆಯುತ್ತಿರುವ ಪ್ರತಿ ವಿದ್ಯಾರ್ಥಿಗೆ ಖಾಸಗಿ ಶಾಲೆಗಳಲ್ಲಿ ವರ್ಷವೊಂದಕ್ಕೆ ರು.15. 698 ವೆಚ್ಚವಾಗುತ್ತದೆ. ಆದರೆ, ಸರ್ಕಾರ ಕೇವಲ ರು. 11,848 ಮಾತ್ರ ಪಾವತಿ ಮಾಡುತ್ತಿದೆ. ಅಲ್ಲದೆ, ಹೆಚ್ಚುವರಿ ಮೊತ್ತವನ್ನು ಪಡೆಯದಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಸೆ.19 ರಂದು ಸುತ್ತೋಲೆ ಹೊರಡಿಸಿದೆ. ಇದರಿಂದಾಗಿ ಆ ಹೆಚ್ಚುವರಿ ಮೊತ್ತವನ್ನು ಭರಿಸುವವರು ಯಾರು ಎಂದು ಅರ್ಜಿಯಲ್ಲಿ ಮನವಿ ಮಾಡಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com