ಈ ವೇಳೆ ನೆರವಿಗೆ ಧಾವಿಸಿದ ಸ್ಥಳೀಯರು ಗಾಯಾಳು ಮುಸ್ತಾಕ್ ಶೇಖ್‍ರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿದರಾದರೂ ಚಿಕಿತ್ಸೆ ಫಲಿಸದೆ ಮೃತಪಟ್ಟರು. ಸೈಕಲ್ ಚಾಲಕ ಹಸನ್ ಯಾವುದೇ ಗಾಯಗಳಾಗದೆ ಸಿನಿಮೀಯ ರೀತಿಯಲ್ಲಿ ಪಾರಾಗಿದ್ದಾರೆ ಎಂದು ಪೊಲೀಸರು ತಿಳಿಸಿದರು. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಯಲಹಂಕ ಸಂಚಾರ ಠಾಣೆ ಪೊಲೀಸರು, ಕಾರು ಹಾಗೂ ಚಾಲಕನ್ನು ವಶಕ್ಕೆ ಪಡೆದು ತನಿಖೆ ಮುಂದುವರಿಸಿದ್ದಾರೆ.