ಗುರುಶ್ರೀ ಚಿತ್ರಮಂದಿರದಲ್ಲಿ ಇಂದು ಬೆಳಗ್ಗೆ 7 ಗಂಟೆಯಿಂದಲೇ ಮಾಸ್ಟರ್ ಪೀಸ್ ಚಿತ್ರದ ಪ್ರದರ್ಶನ ನಡೆಯುತ್ತಿದ್ದು, ಪ್ರತಿಭಟನಾಕಾರರು ಚಿತ್ರಮಂದಿರದ ಮುಂದೆ ಹಾಕಲಾಗಿದ್ದ ಯಶ್ ಅವರ ಪೋಸ್ಟರ್ ಗಳನ್ನು ಹರಿದು ಯಶ್ ಭಾವಚಿತ್ರಕ್ಕೆ ಬೆಂಕಿ ಹಾಕಿ ತಮ್ಮ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಈ ನಡುವೆ ಅದೇ ಚಿತ್ರಮಂದಿರದಲ್ಲಿದ್ದ ಯಶ್ ಅಭಿಮಾನಿಗಳು ಇದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ್ದು, ರೈತರ ಪ್ರತಿಭಟನೆಯನ್ನು ವಿರೋಧಿಸಿದ್ದಾರೆ. ಈ ವೇಳೆ ಪ್ರತಿಭಟನಾಕಾರರು ಮತ್ತು ಯಶ್ ಅಭಿಮಾನಿಗಳ ನಡುವೆ ಮಾತಿನ ಚಕಮಕಿ ನಡೆಯಿತಾದರೂ ಪೊಲೀಸರ ಮಧ್ಯಪ್ರವೇಶದೊಂದಿಗೆ ಪರಿಸ್ಥಿತಿ ತಿಳಿಗೊಂಡಿದೆ.