ಹೊಸ ವರ್ಷದ ಸಂಭ್ರಮ ವಿಸ್ತರಣೆಗೆ ಚಿಂತನೆ

ಈ ಬಾರಿ ಹೊಸ ವರ್ಷದ ಸಂಭ್ರಮಾಚರಣೆ ಅವಧಿಯನ್ನು ರಾತ್ರಿ 1ರಿಂದ ಬೆಳಗಿನ ಜಾವ 3 ಗಂಟೆ ವರೆಗೆ ವಿಸ್ತರಿಸುವ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದೆ...
(ಸಾಂದರ್ಭಿಕ  ಚಿತ್ರ)
(ಸಾಂದರ್ಭಿಕ ಚಿತ್ರ)
Updated on: 

ಬೆಂಗಳೂರು: ಈ ಬಾರಿ ಹೊಸ ವರ್ಷದ ಸಂಭ್ರಮಾಚರಣೆ ಅವಧಿಯನ್ನು ರಾತ್ರಿ 1ರಿಂದ ಬೆಳಗಿನ ಜಾವ 3 ಗಂಟೆ ವರೆಗೆ ವಿಸ್ತರಿಸುವ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದೆ.

ಈ ಹಿಂದೆ ಹೊಸ ವರ್ಷದ ಸಂಭ್ರಮಾಚರಣೆಗೆ ರಾತ್ರಿ 1 ಗಂಟೆವರೆಗೆ ಅವಕಾಶ ನೀಡಲಾಗಿತ್ತು. ಈ ಬಾರಿ ಬೆಳಗಿನ ಜಾವ 3 ಗಂಟೆ ವರೆಗೆ ವಿಸ್ತರಿಸಲು ಚಿಂತಿಸಲಾಗಿದೆ. ಈ ಕುರಿತು ಸರ್ಕಾರದ ಮಟ್ಟದಲ್ಲಿ ಚರ್ಚೆ ನಡೆಯುತ್ತಿದೆ ಎಂದು ಪಶ್ಚಿಮ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತ ಪಿ.ಹರಿಶೇಖರನ್ ಬುಧವಾರ ಸುದ್ದಿಗಾರರಿಗೆ ತಿಳಿಸಿದರು.

ಅವಧಿ ವಿಸ್ತರಿಸುವ ಸಂಬಂಧ ಹಿರಿಯ ಪೊಲೀಸ್ ಅಧಿಕಾರಿಗಳು ಒಪ್ಪಿಗೆ ಸೂಚಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದು, ಸರ್ಕಾರದಿಂದಲೂ ಒಪ್ಪಿಗೆ ದೊರೆಯುವ ಸೂಚನೆಯಿದೆ. ಕೆಲವೇ ದಿನಗಳಲ್ಲಿ ಸ್ಪಷ್ಟ ನಿರ್ಧಾರ ಹೊರಬೀಳಲಿದೆ ಎಂದು ಅವರು ತಿಳಿಸಿದರು. ಈ ವೇಳೆ ಅಪರಾಧ ಪ್ರಕರಣ ಹೆಚ್ಚಾಗುವ ಸಂಭವವೂ ಇದೆ. ಹೀಗಾಗಿ ಅಪರಾಧ ತಡೆಗೆ ಅಗತ್ಯ ಕ್ರಮವಹಿಸಲಾಗುತ್ತಿದೆ ಎಂದು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com