ಹೊಸ ವರ್ಷಾಚರಣೆಗೆ ತಡರಾತ್ರಿ ಒಂದು ಗಂಟೆವರೆಗೆ ಮದ್ಯ

ಮದ್ಯಪ್ರಿಯರಿಗೆ ಒಂದು ಸಿಹಿ ಸುದ್ದಿ. ಕ್ರಿಸ್ ಮಸ್ ಮತ್ತು ಹೊಸ ವರ್ಷಾಚರಣೆ ಅಂಗವಾಗಿ ಬೆಂಗಳೂರು ನಗರದಲ್ಲಿ ತಡರಾತ್ರಿ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ಮದ್ಯಪ್ರಿಯರಿಗೆ ಒಂದು ಸಿಹಿ ಸುದ್ದಿ. ಕ್ರಿಸ್ ಮಸ್ ಮತ್ತು ಹೊಸ ವರ್ಷಾಚರಣೆ ಅಂಗವಾಗಿ ಬೆಂಗಳೂರು ನಗರದಲ್ಲಿ ತಡರಾತ್ರಿ ಒಂದು ಗಂಟೆಯವರೆಗೆ ಬಾರ್ ಅಂಡ್ ರೆಸ್ಟೋರೆಂಟ್ ಗಳು, ಕ್ಲಬ್ ಗಳು ಮದ್ಯ ಮಾರಾಟ ಮಾಡಬಹುದು ಎಂದು ಸ್ಥಳೀಯ ಠಾಣೆ ಮತ್ತು ಅಬಕಾರಿ ಇಲಾಖೆ ಆದೇಶ ಹೊರಡಿಸಿದೆ.

ಇಂದಿನಿಂದ ಜನವರಿ 1ರವರೆಗೆ ಮಾತ್ರ ಈ ಅನುಮತಿ ಇರುತ್ತದೆ. ವೈನ್ ಮತ್ತು ಲಿಕ್ಕರ್ ಶಾಪ್ ಗಳಿಗೆ ಈ ಆದೇಶ ಅನ್ವಯವಾಗುವುದಿಲ್ಲ ಎಂದು ಪೊಲೀಸ್ ಇಲಾಖೆ ತಿಳಿಸಿದೆ.

ಹೊಸ ವರ್ಷಾಚರಣೆ ಎಂದು ಸಾರ್ವಜನಿಕ ಪ್ರದೇಶಗಳಲ್ಲಿ ಧ್ವನಿವರ್ಧಕಗಳನ್ನು ಬಳಸುವುದಾಗಲಿ, ಬೇರೆಯವರಿಗೆ ಕಿರಿಕಿರಿ ಉಂಟು ಮಾಡುವುದಾಗಲಿ, ರಸ್ತೆಯಲ್ಲಿ ಮೋಜು ಮಸ್ತಿ ಮಾಡುವುದಾಗಲಿ ಮಾಡಿದರೆ ಕಠಿಣ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಬೆಂಗಳೂರು ಪೊಲೀಸ್ ಆಯುಕ್ತ ಮೆಘರಿಕ್ ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com