ವಿರೋಧ ಪಕ್ಷ ಹತ್ತಿಕ್ಕುತ್ತಿರುವ ಬಿಜೆಪಿ: ಖರ್ಗೆ ಆರೋಪ

ಲೋಕಸಭೆಯಲ್ಲಿ ಮಸೂದೆಗಳನ್ನು ಮಂಡಿಸುವ ಸಂದರ್ಭಗಳಲ್ಲಿ ಬಿಜೆಪಿ ಸರ್ಕಾರ ಏಕಪಕ್ಷೀಯವಾಗಿ ನಿರ್ಧಾರ ಕೈಗೊಂಡು ವಿರೋಧ ಪಕ್ಷವನ್ನು ಹತ್ತಿಕ್ಕುವ ಕೆಲಸ ಮಾಡುತ್ತಿದೆ. ಇದಕ್ಕೆ ಕಾಂಗ್ರೆಸ್ ಪಕ್ಷ ಮಣಿಯುವುದಿಲ್ಲ ಎಂದು ಲೋಕಸಭೆಯಲ್ಲಿ ಕಾಂಗ್ರೆಸ್ ಸಂಸದೀಯ...
ಮಲ್ಲಿಕಾರ್ಜುನ ಖರ್ಗೆ (ಸಂಗ್ರಹ ಚಿತ್ರ)
ಮಲ್ಲಿಕಾರ್ಜುನ ಖರ್ಗೆ (ಸಂಗ್ರಹ ಚಿತ್ರ)
Updated on: 

ಮಡಿಕೇರಿ: ಲೋಕಸಭೆಯಲ್ಲಿ ಮಸೂದೆಗಳನ್ನು ಮಂಡಿಸುವ ಸಂದರ್ಭಗಳಲ್ಲಿ ಬಿಜೆಪಿ ಸರ್ಕಾರ ಏಕಪಕ್ಷೀಯವಾಗಿ ನಿರ್ಧಾರ ಕೈಗೊಂಡು ವಿರೋಧ ಪಕ್ಷವನ್ನು ಹತ್ತಿಕ್ಕುವ ಕೆಲಸ ಮಾಡುತ್ತಿದೆ. ಇದಕ್ಕೆ ಕಾಂಗ್ರೆಸ್ ಪಕ್ಷ ಮಣಿಯುವುದಿಲ್ಲ ಎಂದು ಲೋಕಸಭೆಯಲ್ಲಿ ಕಾಂಗ್ರೆಸ್ ಸಂಸದೀಯ ಪಕ್ಷದ ನಾಯಕರಾಗಿರುವ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

ಶುಕ್ರವಾರ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿಮಾತನಾಡಿ, ಬಿಜೆಪಿಯಲ್ಲಿ ಶೇ.40ರಷ್ಟು ನಾಯಕರು ಕಾಂಗ್ರೆಸ್‍ನವರೇ ಆಗಿದ್ದಾರೆ. ಆರ್‍ಎಸ್‍ಎಸ್ ಹಾಗೂ ಬಿಜೆಪಿ ದೇಶಕ್ಕಾಗಿ ಏನೂ ಮಾಡಿಲ್ಲ ಎಂದರು. ಮೋದಿ ದೇಶದ ಪ್ರಧಾನಿ ಆಗಿ ದೇಶದಿಂದ ನಾಪತ್ತೆಯಾಗಿ ದ್ದಾರೆ. ಅವರು 19 ತಿಂಗಳಲ್ಲಿ 32 ದೇಶಗಳಿಗೆ ಭೇಟಿ ನೀಡಿದ್ದಾರೆ. ಪ್ರವಾಸಿ ಪ್ರಧಾನಿ ಎನಿಸಿಕೊಂಡಿದ್ದಾರೆ. ಕಪ್ಪು ಹಣ ಹಿಂದಕ್ಕೆ ತರುತ್ತೇನೆ ಎಂದು ವಂಚಿಸುತ್ತಿದ್ದಾರೆ.

● ಮಲ್ಲಿಕಾರ್ಜುನ ಖರ್ಗೆ

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com