ಟೆಂಪೋ-ಬೈಕ್ ಡಿಕ್ಕಿ: ಸವಾರ ಸಾವು

ಟೆಂಪೋ ಮತ್ತು ಬೈಕ್ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on: 
ಬೆಂಗಳೂರು: ಟೆಂಪೋ ಮತ್ತು ಬೈಕ್ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಎಲೆಕ್ಟ್ರಾನಿಕ್ ಸಿಟಿ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಶುಕ್ರವಾರ ನಡೆದಿದೆ. 
ಚಂದಾಪುರ ನಿವಾಸಿ ಶ್ರೀಧರ್ (38) ಮೃತಪಟ್ಟವರು. ಗದಗ ಮೂಲದ ಇವರು ಖಾಸಗಿ ಕಂಪನಿ ಉದ್ಯೋಗಿಯಾಗಿದ್ದರು. ಮಧ್ಯಾಹ್ನ 3.30ರ ಸುಮಾರಿನಲ್ಲಿ ಪತ್ನಿ ಶಿಲ್ಪಾ (28) ಹಾಗೂ ಮಗಳು ಸಂವೃದ್ಧಿ (8) ಅವರೊಂದಿಗೆ ಬೈಕ್‍ನಲ್ಲಿ ಮಡಿವಾಳ ಕಡೆಯಿಂದ ಚಂದಾಪುರಕ್ಕೆ ಹೋಗುವಾಗ ನಾಗನಾಥಪುರ ಸರ್ವಿಸ್ ರಸ್ತೆಯಲ್ಲಿ ಎದುರಿನಿಂದ ಬಂದ ಟೆಂಪೋ ಡಿಕ್ಕಿ ಹೊಡೆದಿದೆ. 
ಈ ವೇಳೆ ತೀವ್ರವಾಗಿ ಗಾಯಗೊಂಡಿದ್ದ ಶ್ರೀಧರ್ ಸ್ಥಳದಲ್ಲೇ ಮೃತಪಟ್ಟರು. ಇನ್ನು ಸಣ್ಣ ಪ್ರಮಾಣ ಗಾಯಗಳಾಗಿ ಚಿಕಿತ್ಸೆ ಪಡೆಯುತ್ತಿರುವ ಪತ್ನಿ ಮತ್ತು ಮಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಪೊಲೀಸರು ತಿಳಿಸಿದರು. ಘಟನೆಗೆ ಕಾರಣನಾದ ಟೆಂಪೋ ಚಾಲಕ ಸ್ಥಳದಲ್ಲೇ ವಾಹನ ಬಿಟ್ಟು ಪರಾರಿಯಾಗಿದ್ದಾನೆ. 
ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಎಲೆಕ್ಟ್ರಾನಿಕ್ ಸಿಟಿ ಸಂಚಾರ ಪೊಲೀಸರು ವಾಹನವನ್ನು ವಶಕ್ಕೆ ಪಡೆದಿದ್ದು, ಚಾಲಕನ ಪತ್ತೆಗೆ ತೀವ್ರ ಶೋಧ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com