ಮದುವೆಗೆ ಮನೆಯವರ ವಿರೋಧ: ನವ ದಂಪತಿ ನೇಣಿಗೆ ಶರಣು

ಮನೆಯವರು ಮದುವೆಗೆ ವಿರೋಧ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ನವ ದಂಪತಿಗಳಿಬ್ಬರು ಶನಿವಾರ ನೇಣಿಗೆ ಶರಣಾದ ದಾರುಣ..
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on: 
ತುಮಕೂರು: ಮನೆಯವರು ಮದುವೆಗೆ ವಿರೋಧ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ನವ ದಂಪತಿಗಳಿಬ್ಬರು ಶನಿವಾರ ನೇಣಿಗೆ ಶರಣಾದ ದಾರುಣ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಆನೇಮಳೆ ಗ್ರಾಮದಲ್ಲಿ ನಡೆದಿದೆ.
ಕಳೆದ ಐದು ವರ್ಷಗಳಿಂದ ಪ್ರೀತಿಸುತ್ತಿದ್ದ ಪುರುಷೋತ್ತಮ(23) ಹಾಗೂ ಮಂಜು(20) ಮನೆಯವರ ವಿರೋಧದ ನಡುವೆಯೂ ನಿನ್ನೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಮದುವೆಯ ನಂತರವೂ ಎರಡು ಮನೆಗಳಲ್ಲಿ ಭಿನ್ನಾಭಿಪ್ರಾಯವಿದ್ದರಿಂದ ಇಂದು ನೇಣು ಬೀಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಆತ್ಮಹತ್ಯೆಗೂ ಮುನ್ನ 'ನಮ್ಮಿರನ್ನು ಒಂದೇ ಗುಂಡಿಯಲ್ಲಿ ಸಮಾಧಿ ಮಾಡಿ' ಎಂದು ಡೆತ್‌ನೋಟ್ ಬರೆದಿಟ್ಟು ನವ ದಂಪತಿಗಳು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಈ ಸಂಬಂಧ ತುರುವೇಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com