ಜಿಲ್ಲಾ ಸುದ್ದಿ

ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ 42 ಲಕ್ಷ ರೂ ವ್ಯಯಿಸಿದ ಸಿದ್ದರಾಮಯ್ಯ ಸರ್ಕಾರ!

ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ 42 ಲಕ್ಷ ರೂ ವ್ಯಯಿಸಿದ ಸಿದ್ದರಾಮಯ್ಯ ಸರ್ಕಾರ!
ಸಿದ್ದರಾಮಯ್ಯ(ಸಂಗ್ರಹ ಚಿತ್ರ)
Published On :

ಬೆಂಗಳೂರು: ನೆರೆ ರಾಷ್ಟ್ರಗಳ ಮುಖಂಡರನ್ನು ಆಹ್ವಾನಿಸಿದ್ದ ಪ್ರಧಾನಿ ನರೇಂದ್ರ ಮೋದಿ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ 17 ಲಕ್ಷ ರೂಪಾಯಿ ಖರ್ಚಾಗಿತ್ತು. ಯಾವುದೇ ಗಣ್ಯರನ್ನು ಆಹ್ವಾನಿಸದೇ ಕಂಠೀರವ ಕ್ರೀಡಾಂಗಣದಲ್ಲಿ ಪ್ರಮಾಣವಚನ ಸ್ವೀಕರಿಸಿದ್ದ ಸಿಎಂ ಸಿದ್ದರಾಮಯ್ಯ ಅವರ ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಖರ್ಚಾಗಿರುವುದು ಪ್ರಧಾನಿಯ ಖರ್ಚಿಗಿಂತಲೂ ದುಪ್ಪಟ್ಟು.    
ಟವಲ್, ದಿಂಬು, ಕಂಬಳಿ ಖರೀದಿಗೆ 14 .34 ಲಕ್ಷ ರೂ ಖರ್ಚು ಮಾಡಿದ್ದ ಸಿಎಂ ಸಿದ್ದರಾಮಯ್ಯ, ಕೆಲವೇ ನಿಮಿಷಗಳ ಕಾಲ ನಡೆದಿದ್ದ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಬರೊಬ್ಬರಿ 42 ಲಕ್ಷ ರೂಪಾಯಿ ಖರ್ಚು ಮಾಡಿದ್ದಾರಂತೆ!
ಆರ್.ಟಿ.ಐ ಅಡಿ ಮರಿಲಿಂಗ ಗೌಡ ಎಂಬುವವರು ಪಡೆದಿರುವ ಮಾಹಿತಿ ಪ್ರಕಾರ ಸಿದ್ದರಾಮಯ್ಯ ಅವರೊಬ್ಬರಿಗೇ 30 ,77, 85 ಖರ್ಚು ಮಾಡಲಾಗಿದ್ದು, ಒಟ್ಟಾರೆ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ 41,79,458 ರೂಪಾಯಿ ಖರ್ಚು ಮಾಡಲಾಗಿದೆ ಎಂಬ ಮಾಹಿತಿ ಹೊರಬಿದ್ದಿದೆ. ಕೆಲವೇ ನಿಮಿಷಗಳು ನಡೆಯುವ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಲಕ್ಷಾಂತರ ರೂಪಾಯಿ ತೆರಿಗೆ ಹಣವನ್ನು ಏಕೆ ಖರ್ಚು ಮಾಡಬೇಕು ಎಂದು ಆರ್ ಟಿ ಐ ಕಾರ್ಯಕರ್ತ ಮರಿಲಿಂಗ ಗೌಡ ಪ್ರಶ್ನಿಸಿದ್ದಾರೆ.
2013 ರ ಮೇ.13 ರಂದು ಕಂಠೀರವ ಕ್ರೀಡಾಂಗಣದಲ್ಲಿ ನಡೆದ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕಾಗಿ ಧ್ವನಿ ವರ್ಧಕಗಳು ಹಾಗು ಪೀಠೋಪಕರಣಗಳಿಗಾಗಿ 29,87,969 ರೂಪಾಯಿ ಖರ್ಚು ಮಾಡಲಾಗಿದೆ, ಇನ್ನು ತಾತ್ಕಾಲಿಕ ಶೌಚಾಲಯ ವ್ಯವಸ್ಥೆಗಾಗಿ 89 ,888 ರೂಪಾಯಿಗಳನ್ನು ಖರ್ಚು ಮಾಡಲಾಗಿದೆ. ಇದರ ಒಟ್ಟಾರೆ ಮೊತ್ತ ಪ್ರಧಾನಿ ಮೋದಿ ಅವರ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮಕ್ಕಿಂತಲೂ ದುಪ್ಪಟ್ಟು ಎಂದು ಹೇಳಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.