ಶಿಕ್ಷಕರಿಂದ ಮೌಲ್ಯಮಾಪನ ಬಹಿಷ್ಕಾರದ ಎಚ್ಚರಿಕೆ

ಬೇಡಿಕೆಗಳನ್ನು ಈಡೇರಿಸದೇ ಇದ್ದರೆ 2016 ನೇ ಸಾಲಿನ ಎಸ್ಎಸ್ಎಲ್ ಸಿ ಮೌಲ್ಯಮಾಪನ ಕಾರ್ಯದಿಂದ ದೂರ ಉಳಿಯುವುದಾಗಿ ರಾಜ್ಯ ಪ್ರೌಢಶಾಲಾ ಸಹ ಶಿಕ್ಷಕರ ಸಂಘ ಎಚ್ಚರಿಸಿದೆ.
ವೇತನ ತಾರತಮ್ಯ(ವಿರೋಧಿಸಿ ಶಿಕ್ಷಕರ ಪ್ರತಿಭಟನೆ(ಸಂಗ್ರಹ ಚಿತ್ರ)
ವೇತನ ತಾರತಮ್ಯ(ವಿರೋಧಿಸಿ ಶಿಕ್ಷಕರ ಪ್ರತಿಭಟನೆ(ಸಂಗ್ರಹ ಚಿತ್ರ)

ಬೆಂಗಳೂರು: ಬೇಡಿಕೆಗಳನ್ನು ಈಡೇರಿಸದೇ ಇದ್ದರೆ 2016 ನೇ ಸಾಲಿನ ಎಸ್ಎಸ್ಎಲ್ ಸಿ ಮೌಲ್ಯಮಾಪನ ಕಾರ್ಯದಿಂದ ದೂರ ಉಳಿಯುವುದಾಗಿ ರಾಜ್ಯ ಪ್ರೌಢಶಾಲಾ ಸಹ ಶಿಕ್ಷಕರ ಸಂಘ ಎಚ್ಚರಿಸಿದೆ. 
ಪ್ರೌಢಶಾಲಾ ಸಹ ಶಿಕ್ಷಕರ ವೇತನ ತಾರತಮ್ಯ ನಿವಾರಿಸಬೇಕು ಎನ್ನುವುದು ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗೆ ಅನೇಕ ವರ್ಷಗಳಿಂದ ಹೋರಾಟ ನಡೆಸುತ್ತಿದ್ದೇವೆ. ಅದರೂ ಸರ್ಕಾರ ಇದುವರೆಗೆ ಸ್ಪಂದಿಸಿಲ್ಲ. ಈಗಲಾದರೂ ನಮ್ಮ ಮನವಿ ಪರಿಗಣಿಸದಿದ್ದಲ್ಲಿ ಎಸ್ಎಸ್ಎಲ್ ಸಿ ಪರೀಕ್ಷೆಯ ಉತ್ತರ ಪತ್ರಿಕೆಯ ಮೌಲ್ಯಮಾಪನ ಕಾರ್ಯವನ್ನು ರಾಜ್ಯವ್ಯಾಪಿ ಸಂಪೂರ್ಣ ಸ್ಥಗಿತಗೊಳಿಸಲಾಗುವುದು ಎಂದು ಸಂಘದ ಅಧ್ಯಕ್ಷ ಹೆಚ್.ಕೆ ಮಂಜುನಾಥ್ ತಿಳಿಸಿದರು.
ಸಹ ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಕಳೆದ ಜನವರಿ 17 ಮತ್ತು ಆಗಸ್ಟ್ 21 ರಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವರು ಸಂಘದ ಪದಾಧಿಕಾರಿಗಳ ಸಭೆ ನಡೆಸಿ ಸಮಸ್ಯೆ ಬಗೆಹರಿಸಿಕೊಡುವುದಾಗಿ ಭರವಸೆ ನೀಡಿದ್ದರು. ಆದರೆ ಈವರೆಗೆ ಯಾವುದೇ ಕ್ರಮಕೈಗೊಂಡಿಲ್ಲ. ಆದ್ದರಿಂದ ಅನಿವಾರ್ಯವಾಗಿ ಮುಷ್ಕರದ ಹಾದಿಯ ಬಗ್ಗೆ ಚಿಂತನೆ ನಡೆಸಲಾಗಿದೆ. ಇದರಿಂದ ಉಂಟಾಗುವ ಶೈಕ್ಷಣಿಕ ಅಡಚಣೆಗೆ ಸರ್ಕಾರವೇ ನೇರ ಹೊಣೆ ಎಂದು ಎಚ್ಚರಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com