ಪೊಲೀಸರಿಂದ ರು.14 ಕೋಟಿ ಮೌಲ್ಯದ ವಸ್ತು ಜಪ್ತಿ

ಪ್ರಸಕ್ತ ಸಾಲಿನಲ್ಲಿ 999 ಪ್ರಕರಣಗಳನ್ನು ಭೇದಿಸಿರುವ ಪಶ್ಚಿಮ ವಿಭಾಗದ ಪೊಲೀಸರು 735 ಮಂದಿ ಆರೋಪಿಗಳನ್ನು ಬಂಧಿಸುವ ಮೂಲಕ ಸುಮಾರು ರು.14 ಕೋಟಿ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on: 

ಬೆಂಗಳೂರು: ಪ್ರಸಕ್ತ ಸಾಲಿನಲ್ಲಿ 999 ಪ್ರಕರಣಗಳನ್ನು ಭೇದಿಸಿರುವ ಪಶ್ಚಿಮ ವಿಭಾಗದ ಪೊಲೀಸರು 735 ಮಂದಿ ಆರೋಪಿಗಳನ್ನು ಬಂಧಿಸುವ ಮೂಲಕ ಸುಮಾರು ರು.14 ಕೋಟಿ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

36 ಕೆ.ಜಿ. 302 ಗ್ರಾಂ ಚಿನ್ನಾಭರಣ, 31 ಕೆ.ಜಿ. 82 ಗ್ರಾಂ ಬೆಳ್ಳಿಯ ಸಾಮಾನುಗಳು, ರು.71.89 ಲಕ್ಷ ನಗದು, 439 ದ್ವಿಚಕ್ರ ವಾಹನ, 21 ತ್ರಿಚಕ್ರ ವಾಹನ, 13 ನಾಲ್ಕು ಚಕ್ರದ ವಾಹನ ಹಾಗೂ ಎಲೆಕ್ಟ್ರಾನಿಕ್ ವಸ್ತುಗಳು ಸೇರಿದಂತೆ ಒಟ್ಟು ರು.14,02,74,198 ಮೌಲ್ಯದ ವಸ್ತುಗಳನ್ನು ಆರೋಪಿಗಳಿಂದ ಜಪ್ತಿ ಮಾಡಿದ್ದಾರೆ. ಅಪರಾಧ ತಡೆ ಮಾಸಾಚರಣೆ ಅಂಗವಾಗಿ
ಬುಧವಾರ ಸ್ವಾತಂತ್ರ್ಯ ಉದ್ಯಾನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಕಳವು ವಸ್ತುಗಳನ್ನು ಪ್ರದರ್ಶಿಸಲಾಯಿತು. ಇದೇ ವೇಳೆ ನಗರ ಪೊಲೀಸ್ ಆಯುಕ್ತ ಎನ್.ಎಸ್.ಮೇಘರಿಕ್ ಅವರು ವಾರಸುದಾರರಿಗೆ ವಸ್ತುಗಳನ್ನು ಹಸ್ತಾಂತರಿಸಿದರು.

ವಿವಿಧ ಪ್ರಕರಣಗಳ ಪತ್ತೆಯಲ್ಲಿ ಭಾಗವಹಿಸಿದ್ದ ಪೊಲೀಸರ ಕಾರ್ಯವನ್ನು ಮುಕ್ತ ಕಂಠದಿಂದ ಶ್ಲಾಘಿಸಿದರು. ಡಿಸಿಪಿ ಲಾಬೂರಾಮï ಸೇರಿದಂತೆ ಹಿರಿಯ-ಕಿರಿಯ ಪೊಲೀಸ್ ಅಧಿಕಾರಿಗಳು ಉಪಸ್ಥಿತರಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com