ಜಿಲ್ಲಾ ಸುದ್ದಿ

ಹೊಸ ವರ್ಷ ಪಾರ್ಟಿ: ಕುಡಿದ ಮತ್ತಿನಲ್ಲಿದ್ದ ಯುವಕ ಕಟ್ಟಡದಿಂದ ಬಿದ್ದು ಸಾವು

ಹೊಸ ವರ್ಷದ ಸಂಭ್ರಮಾಚರಣೆ ವೇಳೆ ಕುಡಿದ ಮತ್ತಿನಲ್ಲಿದ್ದ ಯುವಕನೊಬ್ಬ ಕಟ್ಟಡದಿಂದ ಬಿದ್ದು ಸಾವನ್ನಪ್ಪಿರುವ ಘಟನೆ ನಗರದ ವೈಟ್ ಫೀಲ್ಡ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ...

ಹೊಸ ವರ್ಷ ಪಾರ್ಟಿ: ಕುಡಿದ ಮತ್ತಿನಲ್ಲಿದ್ದ ಯುವಕ ಕಟ್ಟಡದಿಂದ ಬಿದ್ದು ಸಾವು
ಕುಡಿದ ಮತ್ತಿನಲ್ಲಿ ಕಟ್ಟಡದಿಂದ ಬಿದ್ದ ಯುವಕ
Published On :

ಬೆಂಗಳೂರು: ಹೊಸ ವರ್ಷದ ಸಂಭ್ರಮಾಚರಣೆ ವೇಳೆ ಕುಡಿದ ಮತ್ತಿನಲ್ಲಿದ್ದ ಯುವಕನೊಬ್ಬ ಕಟ್ಟಡದಿಂದ ಬಿದ್ದು ಸಾವನ್ನಪ್ಪಿರುವ ಘಟನೆ ನಗರದ ವೈಟ್ ಫೀಲ್ಡ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಬಯೋಟೆಕ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಯುವಕ ಶಿವಕೃಷ್ಣ(25) ಮೃತ ದುರ್ದೈವಿ. ಆಂಧ್ರಪ್ರದೇಶವನಾದ ಶಿವಕೃಷ್ಣ ಸ್ನೇಹಿತರ ಜತೆ ಸೇರಿ ವೈಟ್ ಫೀಲ್ಡ್ ನ ನಲ್ಲೂರಹಳ್ಳಿಯ ವೃತ್ತದಲ್ಲಿದ್ದ ಕಟ್ಟಡದಲ್ಲಿ ರೂಂ ಮಾಡಿಕೊಂಡಿದ್ದನು.

ನಿನ್ನೆ ರಾತ್ರಿ ಸ್ನೇಹಿತರೆಲ್ಲಾ ಸೇರಿ ಹೊಸ ವರ್ಷದ ಪಾರ್ಟಿ ಮಾಡಿದ್ದು, ರಾತ್ರಿ 1.30ರಲ್ಲಿ ಶಿವಕೃಷ್ಣ ಹೊರಗೆ ಬಂದಿದ್ದಾನೆ. ಸ್ವಲ್ಪ ಹೊತ್ತಿನ ನಂತರ ಸ್ನೇಹಿತರು ಹೊರಗೆ ಬಂದು ನೋಡಿದಾಗ, ಆತ ಕಟ್ಟಡದಿಂದ ಬಿದ್ದು ಸಾವನ್ನಪ್ಪಿರುವುದು ತಿಳಿದಿದೆ.

ಸ್ಥಳಿಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.