ಜಯಾ ಪ್ರಕರಣ: ಲಿಖಿತ ಮನವಿ ಸಲ್ಲಿಸಲು ಆದೇಶ

ಜಯಾ ಪ್ರಕರಣ: ಲಿಖಿತ ಮನವಿ ಸಲ್ಲಿಸಲು ಆದೇಶ

ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರ ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ...

ಬೆಂಗಳೂರು: ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರ ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಪ್ರಾಸಿಕ್ಯೂಷನ್ ಪರ ವಿಶೇಷ ವಕೀಲ (ಎಸ್‍ಪಿಪಿ) ಭವಾನಿ ಸಿಂಗ್ ಅವರ ಮುಂದುವರಿಕೆ ಪ್ರಶ್ನಿಸಿ ಡಿಎಂಕೆ ಕಾರ್ಯದರ್ಶಿ ಅನ್ಬಳಗನ್ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಗೆ ಸಂಬಂಧಿ ಸಿದಂತೆ ವಾದಿ, ಪ್ರತಿವಾದಿಗಳ ಪರ ವಕೀಲರು ಲಿಖಿತ ರೂಪದಲ್ಲಿ ಮನವಿ ಸಲ್ಲಿಸುವಂತೆ ಹೈಕೋರ್ಟ್ ಸೂಚಿಸಿದೆ.

ಈ ಹಿಂದೆ ಎಸ್‍ಪಿಪಿ ನೇಮಕ ಪ್ರಶ್ನಿಸಿ ಅನ್ಬಳಗನ್ ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿದಂತೆ ಏಕದಸದಸ್ಯ ಪೀಠ, ಸುಪ್ರೀಂ ಕೋರ್ಟ್‍ನಿಂದ ಸ್ಪಷ್ಟೀಕರಣ ಪಡೆಯುವಂತೆ ಸೂಚಿಸಿ ಅರ್ಜಿ ವಿಲೇವಾರಿ ಮಾಡಿತ್ತು. ಸುಪ್ರೀಂ ಕೋರ್ಟ್‍ನ ಆದೇಶದ ಮೇರೆಗೆ ರಾಜ್ಯ ಹೈಕೋರ್ಟ್ ಮೇಲ್ಮನವಿ ಅರ್ಜಿ ವಿಚಾರಣೆಗೆ ವಿಶೇಷ ಪೀಠ ರಚಿಸಿ ವಿಚಾರಣೆ ನಡೆಸುತ್ತಿದೆ.

ಮೇಲ್ಮನವಿ ಅರ್ಜಿ ಕುರಿತಂತೆ ಸುಪ್ರೀಂ ಕೋರ್ಟ್, ರಾಜ್ಯ ಹೈಕೋರ್ಟ್‍ಗೆ ನಿರ್ದಿಷ್ಟ ಕಾಲಾ ವಕಾಶ ನೀಡಿದ್ದು ಅರ್ಜಿ ವಿಲೇವಾರಿ ಮಾಡುವಂತೆ ನಿರ್ದೇಶಿಸಿದೆ. ಆದ್ದರಿಂದ ನ್ಯಾಯಪೀಠ ಈ ಹಂತದಲ್ಲಿ ಮಧ್ಯೆ ಪ್ರವೇಶಿಸುವುದು ಸರಿಯಲ್ಲ ಎಂದು ಅಭಿಪ್ರಾಯಪಟ್ಟು ಅರ್ಜಿ ಇತ್ಯರ್ಥ ಪಡಿಸಿತ್ತು. ಏಕಸದಸ್ಯ ಪೀಠದ ಈ ಆದೇಶ ಪ್ರಶ್ನಿಸಿ ಅನ್ಬಳಗನ್ ಸದ್ಯ ಮೇಲ್ಮನವಿ ಅರ್ಜಿ ದಾಖಲಿಸಿದ್ದರು. ವಿಚಾರಣೆ ನಡೆಸಿದ ಮುಖ್ಯ ನ್ಯಾ.ಡಿ.ಎಚ್.ವಘೇಲಾ ಮತ್ತು ನ್ಯಾ.ಅಶೋಕ್ ಬಿ. ಹಿಂಚಿ ಗೇರಿ ಅವರಿದ್ದ ವಿಭಾಗೀಯ ಪೀಠ ಈ ಸೂಚನೆ ನೀಡಿತು.

Related Stories

No stories found.

Advertisement

X
Kannada Prabha
www.kannadaprabha.com