ಫುಟ್ ಪಾತ್ ಟ್ರಾನ್ಸ್ ಫಾರ್ಮರ್ ತೆರವುಗೊಳಿಸಿ

ನಗರದ ಪಾದಚಾರಿ ಮಾರ್ಗದಲ್ಲಿರುವ ಟ್ರಾನ್ಸ್ ಫಾರ್ಮರ್‍ಗಳನ್ನು ತೆರವುಗೊಳಿಸಲು ನಿಮಗಿನ್ನೆಷ್ಟು...
ಫುಟ್ ಪಾತ್ ಟ್ರಾನ್ಸ್ ಫಾರ್ಮರ್ ತೆರವುಗೊಳಿಸಿ

ಬೆಂಗಳೂರು: ನಗರದ ಪಾದಚಾರಿ ಮಾರ್ಗದಲ್ಲಿರುವ ಟ್ರಾನ್ಸ್ ಫಾರ್ಮರ್‍ಗಳನ್ನು ತೆರವುಗೊಳಿಸಲು ನಿಮಗಿನ್ನೆಷ್ಟು ಕಾಲಾವಕಾಶ ಬೇಕಿದೆ? ಪಾದಚಾರಿ ಮಾರ್ಗದಲ್ಲಿರುವ ಟ್ರಾನ್ಸ್ ಫಾರ್ಮರ್ ತೆರವುಗೊಳಿಸು ತ್ತೀರೋ ಇಲ್ಲವೋ ಎಂಬುದನ್ನು ಮುಂದಿನ ವಿಚಾರಣೆ ವೇಳೆ ತಿಳಿಸುವಂತೆ ಹೈಕೋರ್ಟ್ ಖಡಕ್ಕಾಗಿ ಬೆಸ್ಕಾಂಗೆ ತಾಕೀತು ಮಾಡಿದೆ.

ನಗರದಲ್ಲಿ ಪಾದಚಾರಿ ಮಾರ್ಗ ಒತ್ತುವರಿಯಾಗಿರುವ ಕುರಿತು ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾ.ಡಿ.ಎಚ್.ವಘೇಲಾ ಮತ್ತು ನ್ಯಾ.ಅಶೋಕ್ ಬಿ. ಹಿಂಚಿಗೇರಿ ಅವರಿದ್ದ ವಿಭಾಗೀಯ ಪೀಠ, ಪಾದಚಾರಿ ಮಾರ್ಗದಲ್ಲಿ ಟ್ರಾನ್ಸ್ ಫಾರ್ಮರ್ ಅಳವಡಿಕೆಯಿಂದಾಗಿ ಜನ ಸಾಮಾನ್ಯರಿಗೆ, ವಯೋವೃದ್ಧರಿಗೆ ಹಾಗೂ ಮಕ್ಕಳಿಗೆ ತೊಂದರೆಯಾಗುತ್ತಿದೆ. ಜನರ ಜೀವದ ಬಗ್ಗೆ ಕಾಳಜಿಯೇ ಇಲ್ಲವೇ ಎಂದು ಪೀಠ ಖಾರವಾಗಿ ಬೆಸ್ಕಾಂ ಪರ ವಕೀಲರನ್ನು ಪ್ರಶ್ನಿಸಿತು.

ಟ್ರಾನ್ಸ್ ಫಾರ್ಮರ್ ಅನ್ನು ಪಾದಚಾರಿ ಮಾರ್ಗದಿಂದ ತೆರವುಗೊಳಿಸುವ ಸಂಬಂಧ ಮುಂದಿನ ವಿಚಾರಣೆ ವೇಳೆ ಪ್ರಮಾಣ ಪತ್ರ ಸಲ್ಲಿಸುವಂತೆ ಸೂಚಿಸಿ ವಿಚಾರಣೆಯನ್ನು  ಫೆ. 20ಕ್ಕೆ ಮುಂದೂಡಿದೆ. `ಬಿಬಿಎಂಪಿಯಲ್ಲಿ ನಿಯೋಜನೆಗೊಂಡಿರುವ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳನ್ನು ವಾಪಸು ಮಾತೃ ಇಲಾಖೆಗೆ ಕಳುಹಿಸಬೇಕು, ಪಾದಚಾರಿ ಮಾರ್ಗಗಳ ಮೇಲಿನ ಟ್ರಾನ್ಸ್ ಫಾಮರ್ ಗಳನ್ನು ತೆರವುಗೊಳಿಸಬೇಕು ಹಾಗೂ ಈ ದಿಸೆಯಲ್ಲಿ ಸೂಕ್ತ ಮಾರ್ಗದರ್ಶಿ ಸೂತ್ರಗಳನ್ನು ರಚಿಸಲು ಬಿಬಿಎಂಪಿ ಹಾಗೂ ಬೆಸ್ಕಾಂ ನಿರ್ದೇಶನ ನೀಡಬೇಕು' ಎಂದು ಕೋರಿ ವಕೀಲ ಜಿ.ಆರ್.ಮೋಹನ್ ಈ ಅರ್ಜಿ ಸಲ್ಲಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com