100ಕ್ಕೆ ಕರೆ ಮಾಡಿ ಅಸಭ್ಯ ಮಾತು: ಯುವಕನ ಸೆರೆ

ಪೊಲೀಸ್ ಕಂಟ್ರೋಲ್ ರೂಂ ಸಂಖ್ಯೆ 100ಕ್ಕೆ ಕರೆ ಮಾಡಿ ಮಹಿಳಾ ಸಿಬ್ಬಂದಿ ಜತೆ ಅಸಭ್ಯವಾಗಿ ಮಾತನಾಡಿ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ಪೊಲೀಸ್ ಕಂಟ್ರೋಲ್ ರೂಂ ಸಂಖ್ಯೆ 100ಕ್ಕೆ ಕರೆ ಮಾಡಿ ಮಹಿಳಾ ಸಿಬ್ಬಂದಿ ಜತೆ ಅಸಭ್ಯವಾಗಿ ಮಾತನಾಡಿ, ನಿಂದಿಸಿದ ಯುವಕನೊಬ್ಬನನ್ನು ಕಬ್ಬನ್ ಪಾರ್ಕ್ ಪೊಲೀಸರು ಬಂಧಿಸಿದ್ದಾರೆ.

ನೆಲಮಂಗಲ ಸಮೀಪದ ಮಾದನಾಯಕನಹಳ್ಳಿ ನಿವಾಸಿ ಸೋಲೋಮನ್ ಸುಂದರರಾಜ್ (24) ಬಂಧಿತ. 8ನೇ ತರಗತಿಗೆ ವ್ಯಾಸಂಗ ನಿಲ್ಲಿಸಿದ್ದ ಆರೋಪಿ ಸರಕು ಸಾಗಣೆ ಆಟೋದಲ್ಲಿ ಕ್ಲೀನರ್ ಆಗಿ ಕೆಲಸ ಮಾಡುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಫೆ.2ರ ಮಧ್ಯಾಹ್ನ ಕಂಟ್ರೋಲ್ ರೂಂಗೆ ಕರೆ ಮಾಡಿದ್ದ ಸೋಲೋಮನ್, ಕರೆ ಸ್ವೀಕರಿಸುತ್ತಿದ್ದ ಮಹಿಳಾ ಸಿಬ್ಬಂದಿಯೊದಿಗೆ ಕೆಟ್ಟದಾಗಿ ಮಾತನಾಡುತ್ತಿದ್ದ. ಪುರುಷ ಸಿಬ್ಬಂದಿ ಕರೆ ಸ್ವೀಕರಿಸಿದರೆ ಫೋನ್ ಕಟ್ ಮಾಡುತ್ತಿದ್ದ.

ಬರೀ 2 ತಾಸುಗಳ ಅಂತರದಲ್ಲಿ 64 ಬಾರಿ ಕರೆ ಮಾಡಿದ್ದ. ಆರೋಪಿ ಕಿರುಕುಳ ಹೆಚ್ಚಾದಾಗ ನಿಯಂತ್ರಣ ಕೊಠಡಿ ಸಿಬ್ಬಂದಿ ಕಬ್ಬನ್‍ಪಾರ್ಕ್ ಠಾಣೆಗೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಗುರುವಾರ ಸೋಲೋಮನ್‍ನನ್ನು ಬಂಧಿಸಿದ್ದಾರೆ. ಆರೋಪಿ ಕರೆ ಮಾಡಿದ ಬಗ್ಗೆ ಒಪ್ಪಿಕೊಂಡಿದ್ದಾನೆ. ಆದರೆ, ಏಕೆ ಎಂದು ಹೇಳುತ್ತಿಲ್ಲ. ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿರುವ ಲಕ್ಷಣಗಳಿಲ್ಲ. ನ್ಯಾಯಾಲಯಕ್ಕೆ ಹಾಜರುಪಡಿಸಿ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ ಎಂದು ಕಬ್ಬನ್‍ಪಾರ್ಕ್ ಪೊಲೀಸರು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com