ಮಾನವ ಕಳ್ಳ ಸಾಗಣೆ ಮಾಹಿತಿ ನೀಡಲು ಸರ್ಕಾರಕ್ಕೆ ಸೂಚನೆ

ಮಾನವ ಮತ್ತು ಮಕ್ಕಳ ಕಳ್ಳಸಾಗಣೆಯಂತಹ ಪ್ರಕರಣಗಳನ್ನು ಸರ್ಕಾರ ನಿರ್ವಹಣೆ ಮಾಡುವ ಪ್ರಕ್ರಿಯೆಗೆ...
ಹೈಕೋರ್ಟ್
ಹೈಕೋರ್ಟ್

ಬೆಂಗಳೂರು: ಮಾನವ ಮತ್ತು ಮಕ್ಕಳ ಕಳ್ಳಸಾಗಣೆಯಂತಹ ಪ್ರಕರಣಗಳನ್ನು ಸರ್ಕಾರ ನಿರ್ವಹಣೆ ಮಾಡುವ ಪ್ರಕ್ರಿಯೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಜಾರಿಗೊಳಿಸಿರುವ ನಿಯಮಾವಳಿ ಕುರಿತು ಮಾಹಿತಿ ನೀಡುವಂತೆ ಹೈಕೋರ್ಟ್ ಸರ್ಕಾರಕ್ಕೆ ಸೂಚಿಸಿದೆ.

ಇಂತಹ ಪ್ರಕರಣಗಳು ಹೆಚ್ಚಾಗಿ ದಾಖಲಾಗುತ್ತಿದ್ದು, ನಾಪತ್ತೆ ಆದವರನ್ನು ಪತ್ತೆ ಹಚ್ಚುವ ನಿಟ್ಟಿನಲ್ಲಿ ಸರ್ಕಾರ ಸೂಕ್ತ ಮಾರ್ಗಸೂಚಿ ರಚಿಸುವಂತೆ ಕೋರಿ ಹೈಕೋರ್ಟ್ ಕಾನೂನು ಸೇವಾ ಸಮಿತಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಿಸಿತ್ತು.

ವಿಚಾರಣೆ ನಡೆಸಿದ ಮುಖ್ಯ ನ್ಯಾ.ಡಿ.ಎಚ್ ವಘೇಲಾ ಮತ್ತು ನ್ಯಾ.ರಾಮ ಮೋಹನ ರೆಡ್ಡಿ ಅವರಿದ್ದ ವಿಭಾಗೀಯ ಪೀಠ, ಇದಕ್ಕೆ ಸಂಬಂಧಿಸಿದಂತೆ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿ ಫೆ.24ಕ್ಕೆ ವಿಚಾರಣೆ ಮುಂದೂಡಿದೆ.

ಮಾನವ ಕಳ್ಳಸಾಗಣೆಗೆ ಸಂಬಂಧಿಸಿದಂತೆ ಕರ್ನಾಟಕ ರಾಜ್ಯ 4ನೇ ಸ್ಥಾನದಲ್ಲಿದ್ದು, ರಾಜ್ಯದಲ್ಲಿ ಕಳೆದ ನ.2013 ರಿಂದ ನ.2014ರ ವರಗೆ ಪೊಲೀಸರು 11,969 ಪ್ರಕರಣ ದಾಖಲಿಸಿದ್ದಾರೆ. ಇದೊಂದು ಆತಂಕಕಾರಿ ಬೆಳವಣಿಗೆ ಆಗಿದ್ದು ಇದನ್ನು ತಡೆಗಟ್ಟುವಂತೆ ಸರ್ಕಾರಕ್ಕೆ ಸೂಕ್ತ ಮಾರ್ಗದರ್ಶನ ನೀಡಬೇಕು.

ಅಲ್ಲದೇ ಜಾರಿಯಲ್ಲಿರುವ ಐಟಿಪಿಎ, ಪೋಕ್ಸೊ ಕಾಯಿದೆ ಬಲ ಪಡಿಸುವಂತೆ ಸರ್ಕಾರಕ್ಕೆ ನಿರ್ದೇಶಿಸಬೇಕು. ಪ್ರಕರಣದ ತನಿಖೆ, ಪ್ರಾಸಿಕ್ಯೂಶನ್ ಮತ್ತು ಸಂತ್ರಸ್ಥರ ಪುನರ್ವಸತಿ ವ್ಯವಸ್ಥೆ ಕಲ್ಪಿಸುವ ಕುರಿತು ವಿಶೇಷವಾದ ಗಮನಹರಿಸುವಂತೆ ಸರ್ಕಾರಕ್ಕೆ ನಿರ್ದೇಶಿಸಬೇಕೆಂದು ಎಂದು ಮನವಿ ಮಾಡಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com