ಮಹಿಳೆಗೆ ಗುದ್ದಿದ ಪೂಜಾ ಗಾಂಧಿ ಕಾರು..!

ಚಿತ್ರನಟಿ ಪೂಜಾ ಗಾಂಧಿ ಅವರು ಪ್ರಯಾಣಿಸುತ್ತಿದ್ದ ಕಾರು ಮಹಿಳೆಯೊಬ್ಬರಿಗೆ ಡಿಕ್ಕಿ ಹೊಡೆದಿದ್ದು..
ನಟಿ ಪೂಜಾಗಾಂಧಿ (ಸಂಗ್ರಹ ಚಿತ್ರ)
ನಟಿ ಪೂಜಾಗಾಂಧಿ (ಸಂಗ್ರಹ ಚಿತ್ರ)
Updated on

ಬೆಂಗಳೂರು: ಚಿತ್ರನಟಿ ಪೂಜಾ ಗಾಂಧಿ ಅವರು ಪ್ರಯಾಣಿಸುತ್ತಿದ್ದ ಕಾರು ಮಹಿಳೆಯೊಬ್ಬರಿಗೆ ಡಿಕ್ಕಿ ಹೊಡೆದಿದ್ದು, ಗಾಯಗೊಂಡ ಮಹಿಳೆಯನ್ನು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಬೆಂಗಳೂರಿನ ಜಯನಗರದ ಯಡಿಯೂರು ಕೆರೆ ಬಳಿ ಈ ಅಪಘಾತ ಸಂಭವಿಸಿದ್ದು, ನಟಿ ಪೂಜಾಗಾಂಧಿ ಅವರ ಕಾರು ಚಲಾಯಿಸುತ್ತಿದ್ದ ಚಾಲಕ ಶರಣು ದ್ವಿಚಕ್ರವಾಹನವೊಂದಕ್ಕೆ ಡಿಕ್ಕಿ ಹೊಡೆದಿದ್ದಾನೆ. ಕೂಡಲೇ ಮಹಿಳೆ ಕೆಳಗೆ ಬಿದ್ದಿದ್ದು, ಮಹಿಳೆಗೆ ಸಣ್ಣಪುಟ್ಟ ಗಾಯಗಳಾಗಿವೆ. ಕೂಡಲೇ ಕಾರಿನಿಂದ ಕೆಳಗಿಳಿದ ಪೂಜಾಗಾಂಧಿ ಮಹಿಳೆಯನ್ನು ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಿದ್ದಾರೆ. ಅಪಘಾತಕ್ಕೀಡಾದ ಮಹಿಳೆ 51 ವರ್ಷದ ವರ್ಷಾ ಸಾನಿ ಎಂದು ತಿಳಿದುಬಂದಿದೆ.

ಅಪಘಾತ ಮಾಡಿ ನುಣುಚಿಕೊಳ್ಳದೇ ಸ್ವತಃ ತಾವೇ ಗಾಯಾಳು ಮಹಿಳೆಯನ್ನು ಆಸ್ಪತ್ರೆಗೆ ದಾಖಲು ಮಾಡುವ ಮೂಲಕ ನಟಿ ಪೂಜಾಗಾಂಧಿ ತಮ್ಮ ಕರ್ತವ್ಯವನ್ನು ನಿಭಾಯಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com