

ಬೆಂಗಳೂರು: ನಟ ದರ್ಶನ್ ಹುಟ್ಟುಹಬ್ಬದ ಅಂಗವಾಗಿ ಭಾನುವಾರ ರಾತ್ರಿಯಿಂದಲೇ ಅವರ ಮನೆಮುಂದೆ ನೆರೆದಿದ್ದ ಅಭಿಮಾನಿಗಳು ಮಾಧ್ಯಮದವರ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಧ್ಯಮದವರು ಇದುವರೆಗೂ ದೂರು ನೀಡಿಲ್ಲ.
ಹಲ್ಲೆಗೊಳಗಾದರು ದೂರು ನೀಡಿದಲ್ಲಿ ತಪ್ಪಿತಸ್ಥರ ವಿರುದ್ಧ ಕ್ರಮಕೈಗೊಳ್ಳಲಾಗುವುದು ಇಲ್ಲವೇ ಪೊಲೀಸರೇ ಸ್ವಯಂ ದೂರು ದಾಖಲಿಸಿ ಕೊಂಡು ತನಿಖೆ ನಡೆಸಿ, ಆರೋಪಿಗಳನ್ನು ಬಂಧಿಸಲಾಗುವುದು ಎಂದು ಹೇಳಿದರು.
ಬೆಂಗಳೂರು ಬಾಂಬ್ ಸ್ಫೋಟ: ತನಿಖೆ ಚುರುಕು
ನಗರದ ಚರ್ಚ್ ಸ್ಟ್ರೀಟ್‍ನಲ್ಲಿ ಸಂಭವಿಸಿದ ಸ್ಫೋಟ ಪ್ರರಕರಣ ಸಂಬಂಧ ರಾಜ್ಯ ಹಾಗೂ ಹೊರರಾಜ್ಯದ ಎರಡು ಗುಂಪುಗಳು ಭಾಗಿಯಾಗಿರುವ ಶಂಕೆ ವ್ಯಕ್ತವಾಗಿದ್ದು, ತನಿಖೆಯನ್ನು ಮತ್ತಷ್ಟು ಚುರುಕು ಗೊಳಿಸಲಾಗಿದೆ. ಆ ಗುಂಪುಗಳ ಬೆನ್ನತ್ತಿರುವ ಪೊಲೀಸರು ರಾಜ್ಯ ಹಾಗೂ ಹೊರರಾಜ್ಯಗಳಲ್ಲಿ ತನಿಖೆ ಆರಂಭಿಸಿದ್ದು, ಆರೋಪಿಗಳನ್ನು ಶೀಘ್ರದಲ್ಲೇ ಬಂಧಿಸಲಾಗುವುದು ಎಂದು ಆಯುಕ್ತರು ತಿಳಿಸಿದರು.