ಸಿಎಂ ಮನೆಗೆ ಬಾಂಬ್ ಬೆದರಿಕೆ ಕರೆ

ಮುಖ್ಯಮಂತ್ರಿಯವರ ಅಧಿಕೃತ ನಿವಾಸ ಕಾವೇರಿ ಗೆ ಬಾಂಬ್ ಇಟ್ಟಿರುವುದಾಗಿ ಪೊಲೀಸ್ ನಿಯಂತ್ರಣ ಕೊಠಡಿಗೆ ಬೆದರಿಕೆ ಹಿನ್ನೆಲೆಯಲ್ಲಿ ಕೆಲ ಕಾಲ...
ಸಿಎಂ ಮನೆಗೆ ಬಾಂಬ್ ಬೆದರಿಕೆ ಕರೆ

ಬೆಂಗಳೂರು: ಮುಖ್ಯಮಂತ್ರಿಯವರ ಅಧಿಕೃತ ನಿವಾಸ ಕಾವೇರಿ ಗೆ ಬಾಂಬ್ ಇಟ್ಟಿರುವುದಾಗಿ ಪೊಲೀಸ್ ನಿಯಂತ್ರಣ ಕೊಠಡಿಗೆ ಬೆದರಿಕೆ ಹಿನ್ನೆಲೆಯಲ್ಲಿ ಕೆಲ ಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.

ಸಂಜೆ 7.45ರ ಸುಮಾರಿಗೆ ಕರೆ ಮಾಡಿದ ವ್ಯಕ್ತಿಯೊಬ್ಬ ಸಿಎಂ ಮನೆಗೆ ಬಾಂಬ್ ಇಟ್ಟಿರುವುದಾಗಿ ಹೇಳಿ ಫೋನ್ ಕಟ್ ಮಾಡಿದ. ಬಾಂಬ್ ಪತ್ತೆ, ನಿಷ್ಕ್ರಿಯ ದಳ ಹಾಗೂ ಶ್ವಾನ ದಳ ಸಿಬ್ಬಂದಿ 1 ತಾಸು ತೀವ್ರ ತಪಾಸಣೆ ನಡೆಸಿದರು. ಆದರೆ, ಎಲ್ಲಿಯೂ ಬಾಂಬ್ ಪತ್ತೆಯಾಗದ ಕಾರಣ ಇದು ಹುಸಿ ಕರೆ ಎನ್ನುವುದು ಖಚಿತಗೊಂಡಿತು ಎಂದು ಪೊಲೀಸ್ ಅಧಿಕಾರಿ ತಿಳಿಸಿದರು.

ಮುಖ್ಯಮಂತ್ರಿಗಳ ನಿವಾಸಕ್ಕೆ ದಿನದ 24ಗಂಟೆಯು ಗರಿಷ್ಠ ಭದ್ರತೆ ಒದಗಿಸಲಾಗಿರುತ್ತದೆ. ಹೀಗಾಗಿ, ಆರಂಭದಲ್ಲೇ ಇದು ಹುಸಿ ಕರೆ ಎನ್ನುವುದು ಗೊತ್ತಿತ್ತು. ಆದರೆ, ಮುಂಜಾಗ್ರತಾ ಕ್ರಮವಾಗಿ ಬಾಂಬ್ ಪತ್ತೆ ದಳ ಸಿಬ್ಬಂದಿ ಕಾರ್ಯಪ್ರವೃತ್ತರಾದರು ಎಂದು ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com