ಸಾತನೂರು: ಚಲಿಸುತ್ತಿದ್ದ ಕಾರು ನಿಯಂತ್ರಣ ಕಳೆದುಕೊಂಡು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಮೃತಪ್ಪಟ್ಟು ಮೂರು ಮಂದಿ ಗಾಯಗೊಂಡಿರುವ ಘಟನೆ ಹಾರೋಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಕುಂಬಾರಶೆಡ್ ಬಳಿ ನಡೆದಿದೆ.
ಕನಕಪುರದ ದೊಡ್ಡಿ ಬೀದಿ ನಿವಾಸಿ ದೀಪು(24) ಮತ್ತು ರಾಜು(26) ಮೃತ ದುರ್ದೈವಿಗಳು. ಸೋಮ, ಗಿರಿ, ಆನಂದ ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸ್ನೇಹಿತನ ಮದುವೆಗೆ ಬಟ್ಟೆ ಖರೀದಿಸಲು ಐವರು ಸ್ನೇಹಿತರು ಕಾರಿನಲ್ಲಿ ಬೆಂಗಳೂರಿಗೆ ತೆರಳಿ ವಾಪಸಾಗುತ್ತಿದ್ದರು. ಕುಂಬಾರ ಸ್ಟ್ರೀಟ್ ಬಳಿಯ ತಿರುವಿನಲ್ಲಿ ಚಾಲಕನ ನಿಯಂತ್ರಣ ಕಳೆದುಕೊಂಡ ಕಾರು ಮರಕ್ಕೆ ಅಪ್ಪಳಿಸಿದೆ. ಅಪಘಾತದಲ್ಲಿ ದೀಪು ಸ್ಥಳದಲ್ಲೇ ಸಾವನ್ನಪ್ಪಿದ್ದರೆ, ರಾಜು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ.
Advertisement