ಚರ್ಚ್‍ಸ್ಟ್ರೀಟ್ ಬಾಂಬ್ ಸ್ಫೋಟ
ಜಿಲ್ಲಾ ಸುದ್ದಿ
ಚರ್ಚ್‍ಸ್ಟ್ರೀಟ್ ಪ್ರಕರಣ: ಇಬ್ಬರು ಉಗ್ರರು ವಶಕ್ಕೆ
ಚರ್ಚ್‍ಸ್ಟ್ರೀಟ್ ಬಾಂಬ್ ಸ್ಫೋಟ ಪ್ರಕರಣ ಸಂಬಂಧ ವಿಚಾರಣೆಗಾಗಿ ಬಿಹಾರದ ಪಟನಾ ಜೈಲಿನಲ್ಲಿರುವ ಇಬ್ಬರು ಉಗ್ರರನ್ನು ವಶಕ್ಕೆ ಪಡೆದಿರುವ...
ಬೆಂಗಳೂರು: ಚರ್ಚ್‍ಸ್ಟ್ರೀಟ್ ಬಾಂಬ್ ಸ್ಫೋಟ ಪ್ರಕರಣ ಸಂಬಂಧ ವಿಚಾರಣೆಗಾಗಿ ಬಿಹಾರದ ಪಟನಾ ಜೈಲಿನಲ್ಲಿರುವ ಇಬ್ಬರು ಉಗ್ರರನ್ನು ವಶಕ್ಕೆ ಪಡೆದಿರುವ ನಗರ ಪೋಲೀಸರು ಬೆಂಗಳೂರಿಗೆ ಕರೆ ತರುತ್ತಿದ್ದಾರೆ. ನರೇಂದ್ರ ಮೋದಿ ಪಾಟನಾದ ಗಾಂಧಿ ಮೈದಾನದಲ್ಲಿ 2013ರ ಅ.27ರಂದು ಲೋಕಸಭೆ ಚುನಾವಣೆ ಪ್ರಚಾರ ರ್ಯಾಲಿ ನಡೆಸುತ್ತಿದ್ದ ವೇಳೆ 10 ಬಾಂಬ್ ಸ್ಫೋಟ ಸಂಭವಿಸಿದ್ದವು. ಐವರು ಮೃತಪಟ್ಟು 83 ಮಂದಿ ಗಾಯಗೊಂಡಿದ್ದರು. ಪ್ರಕರಣ ಸಂಬಂಧ ಎನ್‍ಐಎ ಅಧಿಕಾರಿಗಳು ಹಲವು ಆರೋಪಿಗಳನ್ನು ಬಂಧಿಸಿದ್ದಾರೆ. ಈ ಪೈಕಿ ಪ್ರಮುಖ ಆರೋಪಿಗಳಾದ ಉಮರ್ ಸಿದ್ದಿಕ್ಕಿ ಹಾಗೂ ಹೈದರ್ ಅಲಿ ಎಂಬುವರನ್ನು ಬಂಧಿಸಿದ್ದರು. ಪಟನಾ ಬಾಂಬ್ ಸ್ಫೋಟಕ್ಕೂ ಚರ್ಚ್‍ಸ್ಟ್ರೀಟ್ ಬಾಂಬ್ ಸ್ಫೋಟಕ್ಕೂ ಸಾಮ್ಯತೆ ಕಂಡು ಬಂದಿದೆ. ಹೀಗಾಗಿ, ಬಿಹಾರ ನ್ಯಾಯಾಲಯದಿಂದ ಬಾಡಿ ವಾರೆಂಟ್ ಪಡೆದು ಇಬ್ಬರನ್ನು ನಗರಕ್ಕೆ ಕರೆತರಲಾಗುತ್ತಿದೆ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ