
ಬೆಂಗಳೂರು: ಬೆಂಗಳೂರು ಪೊಲೀಸ್ ಆಯುಕ್ತ ಎಂ.ಎನ್.ರೆಡ್ಡಿ ಅವರ ಬದಲಾವಣೆ ಸದ್ಯಕ್ಕಿಲ್ಲ ಎಂದು ಗೃಹ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ.
ರೆಡ್ಡಿ ಅವರಿಗೆ ಸದ್ಯದಲ್ಲೇ ಬಡ್ತಿ ದೊರೆಯುವುದರಿಂದ ಬೇರೆ ಎಡಿಜಿಪಿ ದರ್ಜೆಯ ಅಧಿಕಾರಿ ಯನ್ನು ಬೆಂಗಳೂರು ಪೊಲೀಸ್ ಆಯುಕ್ತರಾಗಿ ನೇಮಕ ಮಾಡುವ ಸಾಧ್ಯತೆ ಇದೆಯೇ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಸದ್ಯಕ್ಕೆ ಬದಲಾವಣೆ ಸಾಧ್ಯತೆ ಇಲ್ಲ. ಈ ಬಗ್ಗೆ ಅಂತಿಮ ನಿರ್ಧಾರವನ್ನು ಸಿಎಂ ಸಿದ್ದರಾಮಯ್ಯ ತೆಗೆದು ಕೊಳ್ಳುತ್ತಾರೆ ಎಂದರು.
ಮಂಗಳೂರಿನಲ್ಲಿ ಚರ್ಚ್ ದಾಳಿ ನಡೆದಿಲ್ಲ. ಅಷ್ಟಕ್ಕೂ ಅದು ಚರ್ಚ್ ಅಲ್ಲ. ಅದೊಂದು ಪ್ರಾರ್ಥನಾ ಮಂದಿರ. ಅದರ ಗಾಜಿಗೆ ಯಾರೋ ಕಿಡಿಗೇಡಿಗಳು ಕಲ್ಲು ಹೊಡೆದಿದ್ದಾರೆ. ಪ್ರಕರಣ ದಾಖಲಾಗಿದ್ದು, ಸರ್ಕಾರ ಕ್ರಮ ತೆಗೆದುಕೊಳ್ಳುತ್ತದೆ ಎಂದು ಹೇಳಿದರು.
Advertisement