ರಾಯಚೂರು: ನೀರಿನ ಟ್ಯಾಂಕ್ ಕುಸಿದು ಐವರು ಸಾವು

ರಾಯಚೂರು: ನೀರಿನ ಟ್ಯಾಂಕ್ ಕುಸಿದು ಐವರು ಸಾವು
Updated on: 

ರಾಯಚೂರು: ಇತ್ತೀಚಿಗಷ್ಟೇ ನಿರ್ಮಿಸಲಾಗಿದ್ದ ನೀರಿನ ಟ್ಯಾಂಕ್‌ವೊಂದು ಕುಸಿದು ಬಿದ್ದ ಪರಿಣಾಮ ಐವರು ಸ್ಥಳದಲ್ಲೇ ಮೃತಪಟ್ಟ ಘಟನೆ ಶನಿವಾರ ರಾಯಚೂರು ತಾಲೂಕಿನ ಯಾಪಲದಿನ್ನಿಯಲ್ಲಿ ಸಂಭವಿಸಿದೆ.

ನೀರು ತುಂಬಿದ್ದ ಟ್ಯಾಂಕ್ ದಿಢೀರ್ ಕುಸಿದು ಬಿದ್ದ ಪರಿಣಾಮ, ಸ್ಥಳದಲ್ಲಿದ್ದ ಐವರು ಮೃತಪಟ್ಟಿದ್ದಾರೆ ಮತ್ತು ಕೆಲವರು ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ರಾಯಚೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಎನ್.ನಾಗರಾಜ್ ಅವರು ತಿಳಿಸಿದ್ದಾರೆ.

ವಿಷಯ ತಿಳಿದ ತಕ್ಷಣ ಸ್ಥಳಕ್ಕೆ ಪೊಲೀಸರು ಹಾಗೂ ಅಗ್ನಿ ಶಾಮಕ ಸಿಬ್ಬಂದಿ ಆಗಮಿಸಿದ್ದು, ರಕ್ಷಣಾ ಕಾರ್ಯ ನಡೆಯುತ್ತಿದ್ದೆ. ಕಳಪೆ ಕಾಮಗಾರಿಯೇ ಟ್ಯಾಂಕ್ ಕುಸಿಯಲು ಕಾರಣ ಎನ್ನಲಾಗುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com