ಕೆಪಿಎಸ್‌ಸಿ: ಸರ್ಕಾರದ ಶಿಫಾರಸ್ಸು ಪಟ್ಟಿ ತಿರಸ್ಕಾರ..?

ಕೆಪಿಎಸ್‌ಸಿ ನೇಮಕಾತಿಗೆ ಸಂಬಂಧಿಸಿದಂತೆ ಸರ್ಕಾರದ ಶಿಫಾರಸ್ಸು ಪಟ್ಟಿಯನ್ನು ತಿರಸ್ಕರಿಸುವ ಸಾಧ್ಯತೆ ಇದೆ..
ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ರಾಜ್ಯಪಾಲ ವಜುಭಾಯಿ ವಾಲಾ (ಸಂಗ್ರಹ ಚಿತ್ರ)
ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ರಾಜ್ಯಪಾಲ ವಜುಭಾಯಿ ವಾಲಾ (ಸಂಗ್ರಹ ಚಿತ್ರ)
Updated on: 

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ ನೇಮಕಾತಿಗೆ ಸಂಬಂಧಿಸಿದಂತೆ ಸರ್ಕಾರದ ಶಿಫಾರಸ್ಸು ಪಟ್ಟಿಯನ್ನು ತಿರಸ್ಕರಿಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಈ ಹಿಂದೆ ರಾಜ್ಯಸರ್ಕಾರ ಶಿಫಾರಸ್ಸು ಮಾಡಿ ರಾಜ್ಯಪಾಲರಿಗೆ ಕಳುಹಿಸಿದ್ದ ಪಟ್ಟಿಯಲ್ಲಿ ಕೆಲ ವ್ಯಕ್ತಿಗಳ ಕುರಿತ ಮಾಹಿತ ಅಸ್ಪಷ್ಟವಾಗಿದ್ದು, ಈ ಬಗ್ಗೆ ರಾಜ್ಯಪಾಲ ವಜುಭಾಯಿ ವಾಲ ಅವರು ಅಸಮಾಧಾನಗೊಂಡಿದ್ದಾರೆ. ಹೀಗಾಗಿ ನಿನ್ನೆ ರಾಜ್ಯ ಸರ್ಕಾರಕ್ಕೆ ರಾಜ್ಯಪಾಲರು ಪತ್ರ ಬರೆದಿದ್ದು, ಪತ್ರದಲ್ಲಿ ಪಟ್ಟಿಯಲ್ಲಿರುವ ವ್ಯಕ್ತಿಗಳ ಕುರಿತು ಸಂಪೂರ್ಣ ವಿವರ ನೀಡಿ ಎಂದು ಸರ್ಕಾರಕ್ಕೆ ಸೂಚಿಸಿದ್ದಾರೆ.

ರಾಜ್ಯಪಾಲರು ಸರ್ಕಾರಕ್ಕೆ ಬರೆದಿದ್ದ ಪತ್ರದ ಪ್ರತಿ ಇದೀಗ ಮಾಧ್ಯಮಗಳಿಗೆ ದೊರೆತಿದ್ದು, ಪತ್ರದಲ್ಲಿ 'ಕೆಪಿಎಸ್‌ಸಿ ನೇಮಕಾತಿ ಸಂಬಂಧ ರಾಜ್ಯ ಸರ್ಕಾರ ನೀಡಿರುವ ಶಿಫಾರಸ್ಸು ಪಟ್ಟಿಯಲ್ಲಿರುವ ವ್ಯಕ್ತಿಗಳ ವಿವರ ಅಸ್ಪಷ್ಟವಾಗಿದ್ದು, ಈ ಬಗ್ಗೆ ಹೆಚ್ಚಿನ ವಿವರ ನೀಡಿಲ್ಲ. ಪಟ್ಟಿಯಲ್ಲಿರುವ ವ್ಯಕ್ತಿಗಳ ಲೋಕಾಯುಕ್ತ ಇಲಾಖೆಯ ಮತ್ತು ಗುಪ್ತಚರ ಇಲಾಖೆಯ ನಿರಪೇಕ್ಷಣಾ ಪತ್ರ ಬೇಕಿದೆ. ಮುಖ್ಯವಾಗಿ ಗುಪ್ತಚರ ಇಲಾಖೆಯಿಂದ ಸ್ಪಷ್ಟನೆ ದೊರೆತರೆ ಒಳಿತು. ಆದರೆ ಸರ್ಕಾರ ಲಗತ್ತಿಸಿರುವ ಯಾವುದೇ ದಾಖಲೆಗಳಲ್ಲಿಯೂ ಈ ಬಗ್ಗೆ ಮಾಹಿತಿ ಇಲ್ಲ'.

'ಶಿಫಾರಸ್ಸು ಪಟ್ಟಿಯಲ್ಲಿರುವ ಅಧಿಕಾರಿಗಳು ಕರ್ತವ್ಯಗಳಲ್ಲಿದ್ದಾಗ ಆಮಿಷಗಳಿಗೆ ಬಲಿಯಾಗಬಾರದು. ಈ ಬಗ್ಗೆ ಪಂಜಾಬ್ ಮತ್ತು ಹರ್ಯಾಣ ಹೈಕೋರ್ಟ್‌ಗಳು ಆದೇಶ ನೀಡಿದ್ದು, ಇದೇ ಆದೇಶವನ್ನು ಸುಪ್ರೀಂ ಕೋರ್ಟ್ ಕೂಡ ಎತ್ತಿ ಹಿಡಿದಿದೆ' ಎಂದು ರಾಜ್ಯಪಾಲ ವಜುಭಾಯಿ ವಾಲ ಅವರು ಪತ್ರದಲ್ಲಿ ತಿಳಿಸಿದ್ದಾರೆ ಎಂದು ಹೇಳಲಾಗುತ್ತಿದೆ.

ಒಟ್ಟಾರೆ ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿರುವ ಕೆಪಿಎಸ್‌ಸಿ ನೇಮಕಾತಿ ವಿವಾದ ಇದೀಗ ರಾಜ್ಯಪಾಲರ ಮತ್ತು ರಾಜ್ಯಸರ್ಕಾರದ ಮುಸುಕಿನ ಗುದ್ದಾಟಕ್ಕೆ ಕಾರಣವಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ರಾಜ್ಯಪಾಲರ ನಿಲುವಿನಿಂದಾಗಿ ಮುಜುಗರಕ್ಕೊಳಗಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com