ಮಂಗಳೂರಿನಲ್ಲಿ ಶಂಕಿತ ಉಗ್ರನ ಬಂಧನ

ಬೆಂಗಳೂರು ಸಿಸಿಬಿ ಪೊಲೀಸರು ಮಂಗಳೂರಿನಲ್ಲಿ ಮತ್ತೋರ್ವ ಶಂಕಿತ ಉಗ್ರನನ್ನು ಬಂಧಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಮಂಗಳೂರಿನ ಬಜ್ಪೆ ವಿಮಾನ ನಿಲ್ದಾಣ (ಸಂಗ್ರಹ ಚಿತ್ರ)
ಮಂಗಳೂರಿನ ಬಜ್ಪೆ ವಿಮಾನ ನಿಲ್ದಾಣ (ಸಂಗ್ರಹ ಚಿತ್ರ)

ಮಂಗಳೂರು: ಬೆಂಗಳೂರು ಸಿಸಿಬಿ ಪೊಲೀಸರು ಮಂಗಳೂರಿನಲ್ಲಿ ಮತ್ತೋರ್ವ ಶಂಕಿತ ಉಗ್ರನನ್ನು ಬಂಧಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ಅಧಿಕಾರಿಗಳು ನೀಡಿದ ಮಾಹಿತಿಯ ಮೇರೆಗೆ ಕಾರ್ಯಾಚರಣೆ ನಡೆಸಿದ ಸಿಸಿಬಿ ಪೊಲೀಸರು ಮಂಗಳೂರಿನ ಬಜ್ಪೆ ವಿಮಾನ ನಿಲ್ದಾಣದಲ್ಲಿ ಶಂಕಿತ ಉಗ್ರನೋರ್ವನನ್ನು ಬಂಧಿಸಿದ್ದಾರೆ. ಶಂಕಿತನನ್ನು ಮಹಮದ್ ರಿಯಾಜ್ ಭಟ್ಕಳ್ ಎಂದು ಗುರುತಿಸಲಾಗಿದ್ದು, ಈತ ದಕ್ಷಿಣ ಕನ್ನಡ ಜಿಲ್ಲೆ ಮೂಲದವನೆಂದು ಹೇಳಲಾಗುತ್ತಿದೆ.

ಬೆಂಗಳೂರು ಬಾಂಬ್ ಸ್ಫೋಟ ಪ್ರಕರಣ ಸಂಬಂಧ ತನಿಖೆ ನಡೆಸುತ್ತಿರುವ ಪೊಲೀಸರು ಈಗಾಗಲೇ ಮೂವರು ಶಂಕಿತ ಉಗ್ರರನ್ನು ಬಂಧಿಸಿದ್ದು, ವಿಚಾರಣೆ ಪ್ರಗತಿಯಲ್ಲಿದೆ. ಮೂಲಗಳ ಪ್ರಕಾರ ಬಂಧಿತ ಶಂಕಿತ ಉಗ್ರರು ನೀಡಿರುವ ಮಾಹಿತಿಯ ಮೇರೆಗೆ ಮಹಮದ್ ರಿಯಾಜ್ ಭಟ್ಕಳ್‌ನನ್ನು ಬಂಧಿಸಲಾಗಿದೆ ಎಂದು ತಿಳಿದು ಬಂದಿದೆ.

ಅಲ್ಲದೆ ಬಂಧಿತ ರಿಯಾಜ್ ಭಟ್ಕಳ್ ದುಬೈಗೆ ಪರಾರಿಯಾಗಲು ಮಂಗಳೂರಿನ ಬಜ್ಪೆ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದನು ಮತ್ತು ಈ ವಿಚಾರ ತಿಳಿದಿದ್ದ ಎನ್‌ಐಎ ಅಧಿಕಾರಿಗಳು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಇದರ ಆಧಾರದ ಮೇಲೆ ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ಶಂಕಿತ ಉಗ್ರನನ್ನು ಬಂಧಿಸಿದ್ದಾರೆ ಎಂದು ಹೇಳಾಗುತ್ತಿದೆ.

ರಿಯಾಜ್ ಭಟ್ಕಳ್‌ನ ಬಂಧನದ ಮೂಲಕ ಬೆಂಗಳೂರು ಬಾಂಬ್ ಸ್ಫೋಟ ಪ್ರಕರಣ ಸಂಬಂಧ ಬಂಧನಕ್ಕೀಡಾದವರ ಸಂಖ್ಯೆ 4ಕ್ಕೇರಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com