ಫೋಟೊ ತೆಗೆಯುತ್ತಿದ್ದ ಶಿಕ್ಷಕನಿಗೆ ಧರ್ಮದೇಟು

ಜಮಖಂಡಿ: ಮೊಬೈಲ್ನಲ್ಲಿ ವಿದ್ಯಾರ್ಥಿನಿಯರ ಫೋಟೋ ತೆಗೆಯುತ್ತಿದ್ದ ಶಿಕ್ಷಕನಿಗೆ ಸಾರ್ವಜನಿಕರೇ ಧರ್ಮದೇಟು ನೀಡಿದ ಘಟನೆ ಸೋಮವಾರ ಜರುಗಿದೆ.
ಇಲ್ಲಿಯ ಸರ್ಕಾರಿ ಹಿರಿಯ ಪ್ರಾಥಮಿಕ ಹೆಣ್ಣುಮಕ್ಕಳ ಬನಶಂಕರಿ ಶಾಲೆಯ ಸಹ ಶಿಕ್ಷಕ ಎಸ್.ಟಿ ನಾಟೀಕಾರ ಸಾರ್ವಜನಿಕರಿಂದ ಧರ್ಮದೇಟು ತಿಂದ ಶಿಕ್ಷಕ. ಸೋಮವಾರ ವಿದ್ಯಾರ್ಥಿನಿಯರ ಭಾವಚಿತ್ರಗಳನ್ನು ತನ್ನು ಮೊಬೈಲ್ನಲ್ಲಿ ಸೆರೆ ಹಿಡಿಯುತ್ತಿದ್ದಾಗ ಸಾರ್ವಜನಿಕರ ಕೈಗೆ ಸಿಕ್ಕು ಬಿದ್ದಿದ್ದಾನೆ. ಇದರಿಂದ ಆಕ್ರೋಶಗೊಂಡ ಸಾರ್ವಜನಿಕರು ಶಿಕ್ಷಕನಿಗೆ ಮನಬಂದಂತೆ ಥಳಿಸಿದ್ದಾರೆ.
ಈತ ಶಾಲೆಯ ಕೊಠಡಿಯಲ್ಲಿ ವಿದ್ಯಾರ್ಥಿನಿಯರನ್ನು ಒಬ್ಬೊಬ್ಬರನ್ನಾಗಿ ಕರೆಯಿಸಿಕೊಂಡು ಅವರ ಭಾವಚಿತ್ರ ತೆಗೆಯುತ್ತಿದ್ದ ಕುರಿತು ವಿದ್ಯಾರ್ಥಿನಿಯರು ಪಾಲಕರಿಗೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಸೋಮವಾರ ಪಾಲಕರು ಶಾಲೆಗೆ ಬಂದಾಗ ಈ ಶಿಕ್ಷಕ ಮತ್ತೆ ಇಂತಹ ಕೃತ್ಯಕ್ಕೆ ಮುಂದಾದಾಗ ಥಳಿಸಿದ್ದಾರೆ.
ನಾಟೀಕಾರ ಅವರು ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿರುವ ವಿಷಯ ತಮ್ಮ ಗಮನಕ್ಕೆ ಬಂದಿತ್ತು. ಈ ಬಗ್ಗೆ ಅವರನ್ನು ಕರೆಸಿ ಎಚ್ಚರಿಕೆಯನ್ನೂ ನೀಡಲಾಗಿತ್ತು. ಆದರೂ ಸುಧಾರಿಸಿಕೊಂಡಿಲ್ಲ. ಶಿಕ್ಷಕನ ವರ್ತನೆ ಬಗ್ಗೆ ಬಿಇಓ ಅವರಿಗೂ ಮೌಖಿಕವಾಗಿ ದೂರು ನೀಡಿದ್ದೇನೆ ಎಂದು ಮುಖ್ಯಾಧ್ಯಾಪಕ ಬಿ.ಎಚ್ ಬೆನಕಟ್ಟಿ ಹೇಳಿದರು.
ವಿದ್ಯಾರ್ಥಿನಿಯರು ಜ್ವರ ಬಂದಿದೆ ಎಂದು ಮನೆಗೆ ಹೋಗುವುದಾಗಿ ಹೇಳಿದರೆ ಈತ ಅವರ ಎದೆಗೆ ಕೈಹಾಕಿ ಜ್ವರ ಬಂದಿದೆಯೇ ಎಂಬುದನ್ನು ನೋಡುತ್ತಿದ್ದ ಎಂದು ಇದೇ ವೇಳೆ ಕೆಲ ಪಾಲಕರು ಆರೋಪಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


