
ಬಿಂಕದಕಟ್ಟಿ(ಗದಗ): ಬಿಂಕದಕಟ್ಟಿ ಗ್ರಾಮದ ಬಳಿ ಟಂಟಂಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಟಂಟಂನಲ್ಲಿದ್ದ ಇಬ್ಬರು ದುರ್ಮರಣ ಹೊಂದಿದ್ದಾರೆ.
ಇಂದು ಮಧ್ಯಾಹ್ನ ಪ್ರಯಾಣಿಕರನ್ನು ಹೊತ್ತು ಸಾಗುತ್ತಿದ್ದ ಟಂಟಂಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ನಾಲ್ವರಿಗೆ ಗಂಭೀರ ಗಾಯಗಳಾಗಿವೆ. ಗಾಯಾಳುಗಳನ್ನು ಸ್ಥಳೀಯ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ಗದಗ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.
Advertisement