ಪ್ಲಾಸ್ಟಿಕ್, ಫ್ಲೆಕ್ಸ್ ನಿಷೇಧ

ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಫ್ಲೆಕ್ಸ್ ಮತ್ತು ಪ್ಲಾಸ್ಟಿಕ್ ನಿಷೇಧಿಸಲು ರಾಜ್ಯ ಸರ್ಕಾರ ಮುಂದಾಗಿದ್ದು...
ಬಿಬಿಎಂಪಿ ಸಭೆಯಲ್ಲಿ ಅಧಿಕಾರಿಗಳ ಜತೆ ಮುಖ್ಯಮಂತ್ರಿ ಸಿದ್ದರಾಮಯ್ಯ
ಬಿಬಿಎಂಪಿ ಸಭೆಯಲ್ಲಿ ಅಧಿಕಾರಿಗಳ ಜತೆ ಮುಖ್ಯಮಂತ್ರಿ ಸಿದ್ದರಾಮಯ್ಯ

-ಮೊದಲಿಗೆ ಬೆಂಗಳೂರಲ್ಲಿ ಜಾರಿ, ಬಳಿಕ ಎಲ್ಲೆಡೆ

ಕನ್ನಡಪ್ರಭ ವಾರ್ತೆ, ಬೆಂಗಳೂರು:
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಫ್ಲೆಕ್ಸ್ ಮತ್ತು ಪ್ಲಾಸ್ಟಿಕ್ ನಿಷೇಧಿಸಲು ರಾಜ್ಯ ಸರ್ಕಾರ ಮುಂದಾಗಿದ್ದು, ಸದ್ಯದಲ್ಲೇ ಈ ಸಂಬಂಧ ಆದೇಶ ಹೊರಡಿಸಲು ನಿರ್ಧರಿಸಿದೆ.

ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಬಿಬಿಎಂಪಿ ಅಧಿಕಾರಿಗಳ ಸಭೆಯಲ್ಲಿ ಈ ಮಹತ್ವದ ನಿರ್ಧಾರ ತೆಗೆದುಕೊಳ್ಳಲಾಗಿದ್ದು, ಫ್ಲೆಕ್ಸ್ ಹಾವಳಿ ಬಗ್ಗೆ ಹೈಕೋರ್ಟ್ ಪದೇ ಪದೆ ನೀಡಿದ ಎಚ್ಚರಿಕೆ ಹಿನ್ನೆಲೆಯಲ್ಲಿ ಸರ್ಕಾರ ಈ ಕ್ರಮ ತೆಗೆದುಕೊಂಡಿದೆ.

ಪ್ರಾಯೋಗಿಕವಾಗಿ ಈ ಎರಡೂ ಆದೇಶ ಬೆಂಗಳೂರು ನಗರದಲ್ಲಿ ಮೊದಲು ಜಾರಿಗೆ ಬರಲಿದೆ. ಫ್ಲೆಕ್ಸ್ ನಿಷೇಧದ ನಂತರ ಯಾರಾದರೂ ನಗರದಲ್ಲಿ ಮತ್ತೆ ಫ್ಲೆಕ್ಸ್ ಹಾಕಿದರೆ ಅವರನ್ನು ಕಾನೂನು ರೀತ್ಯ ಸರ್ಕಾರ ದಂಡಿಸಲಿದೆ.

ಅಷ್ಟು ಮಾತ್ರವಲ್ಲ ಯಾರು ಫ್ಲೆಕ್ಸ್ ತಯಾರಿಸುತ್ತಾರೋ ಅವರ ವಿರುದ್ಧ ಪ್ರಕರಣ ದಾಖಲಿಸಲಾಗುತ್ತದೆ. ಒಂದೊಮ್ಮೆ ಫ್ಲೆಕ್ಸ್ ಹಾಕಲೇಬೇಕಾದ ಅನಿವಾರ್ಯ ಸನ್ನಿವೇಶ ನಿರ್ಮಾಣವಾದಾಗ ಪರವಾನಗಿ ಪಡೆದು ಜಾಹೀರಾತು ಫಲಕಗಳನ್ನು ಮಾತ್ರ ಹಾಕಬಹುದು ಎಂದು ಸಭೆ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಸುದ್ದಿಗಾರರಿಗೆ ಮಾಹಿತಿ ನೀಡಿದ್ದಾರೆ.

ಇದರ ಜತೆಗೆ ಪ್ಲಾಸ್ಟಿಕ್ ಕೈ ಚೀಲ ಬಳಕೆಯನ್ನೂ ನಿಷೇಧಿಸಲು ನಿರ್ಧರಿಸಲಾಗಿದೆ. ಪ್ರಾಯೋಗಿಕವಾಗಿ ಬೆಂಗಳೂರು ನಗರದಲ್ಲಿ ಮೊದಲು ಜಾರಿಗೆ ತರುತ್ತೇವೆ. ನಂತರ ರಾಜ್ಯಾದ್ಯಂತ ವಿಸ್ತರಿಸಲಾಗುವುದು. ಸಾರ್ವಜನಿಕರು ಈ ವಿಚಾರದಲ್ಲಿ ಸರ್ಕಾರದ ಜತೆ ಸಹಕರಿಸಬೇಕು. ಪ್ಲಾಸ್ಟಿಕ್ ನಿಷೇಧ ಮಾಡಿದರೂ ಹೊರ ರಾಜ್ಯಗಳಿಂದ ಅವುಗಳನ್ನು ತರುವ ಅಪಾಯ ಇರುವುದರಿಂದ ಚೆಕ್‌ಪೋಸ್ಟ್‌ಗಳಲ್ಲಿ ಪರಿಶೀಲನೆ ಚುರುಕುಗೊಳಿಸಲಾಗುವುದು ಎಂದು ಹೇಳಿದರು.

ಒತ್ತಡ ಹೇರಿ

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಪೆಟ್ರೋಲಿಯಂ ಉತ್ಪನ್ನಗಳ ಬೆಲೆ ಪ್ರತಿ ಬ್ಯಾರಲ್‌ಗೆ 90 ಡಾಲರ್ ಕುಸಿದಿದೆ. ಹೀಗಾಗಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಕಡಿಮೆಯಾಗಿದೆ. ಬೆಲೆ ಇಳಿಕೆಗೆ ಮೋದಿ ಕಾರಣರಲ್ಲ. ಬಿಜೆಪಿ ಅಧಿಕಾರದಲ್ಲಿ ಇರುವ ರಾಜ್ಯಗಳಲ್ಲೂ ಬಸ್ ಪ್ರಯಾಣ ದರ ಇಳಿಕೆಯಾಗಿಲ್ಲ. ಆದರೆ ಅಬಕಾರಿ ಸುಂಕ 4 ಬಾರಿ ಹೆಚ್ಚಳವಾಗಿದ್ದು, ರಾಜ್ಯದ ಬೊಕ್ಕಸಕ್ಕೆ ರು.400 ರಿಂದ ರು.500 ಕೋಟಿ ನಷ್ಟವಾಗಿದೆ ಎಂದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com