ಕೊಳವೆ ಬಾವಿ ಬಂದ್ ವರದಿ ಸಲ್ಲಿಸಲು ಆದೇಶ

ಅನುಪಯುಕ್ತ ಕೊಳವೆಬಾವಿಗಳನ್ನು ಮುಚ್ಚುವುದಕ್ಕೆ ಸಂಬಂಧಿಸಿದಂತೆ ಕಾನೂನು ಸೇವಾ...
ಕೊಳವೆ ಬಾವಿ
ಕೊಳವೆ ಬಾವಿ

ಬೆಂಗಳೂರು: ಅನುಪಯುಕ್ತ ಕೊಳವೆಬಾವಿಗಳನ್ನು ಮುಚ್ಚುವುದಕ್ಕೆ ಸಂಬಂಧಿಸಿದಂತೆ ಕಾನೂನು ಸೇವಾ ಪ್ರಾಧಿಕಾರಕ್ಕೆ ಪ್ರತಿ ಮೂರು ತಿಂಗಳಿಗೊಮ್ಮೆ ಅಂತರ್ಜಲ ಪ್ರಾಧಿಕಾರ ವರದಿ ಸಲ್ಲಿಸಬೇಕು ಎಂದು ಹೈಕೋರ್ಟ್ ಆದೇಶಿಸಿದೆ.

ರಾಜ್ಯದಲ್ಲಿ ತೆರೆದ ಕೊಳವೆ ಬಾವಿಯಲ್ಲಿ ಮಕ್ಕಳು ಬಿದ್ದು ಸಾವನ್ನಪ್ಪಿದ ಘಟನೆ ವರದಿಯಾದ ಹಿನ್ನೆಲೆಯಲ್ಲಿ ಹೈಕೋರ್ಟ್ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಾಗಿತ್ತು. ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೆ.ಎಲ್. ಮಂಜುನಾಥ್ ಹಾಗೂ ನ್ಯಾಯಮೂರ್ತಿ ಎಸ್. ಸುಜಾತಾ ಅಳರಿದ್ದ ವಿಭಾಗೀಯ ಪೀಠ, ಅರ್ಜಿಗೆ ಸಂಬಂಧಿಸಿದಂತೆ ಅಂತರ್ಜಲ ಪ್ರಾಧಿಕಾರವು ಸಮಯಕ್ಕೆ ಸರಿಯಾಗಿ ವರದಿ ಸಲ್ಲಿಸಲು ವಿಫಲವಾದರೆ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸುವಂತೆ ಸೂಚಿಸಿ ಅರ್ಜಿ ಇತ್ಯರ್ಥಪಡಿಸಿದೆ.

2014ರ ಆಗಸ್ಟ್ 30ಕ್ಕೆ ಕೊನೆಗೊಂಡಂತೆ ರಾಜ್ಯದಲ್ಲಿ 1,92,245 ಅನುಪಯುಕ್ತ ಕೊಳವೆಬಾವಿಗಳನ್ನು ಮುಚ್ಚಲಾಗಿದೆ ಎಂದು ಸರ್ಕಾರ ನ್ಯಾಯಾಲಯಕ್ಕೆ ತಿಳಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com