ಜನಾರ್ದನ ರೆಡ್ಡಿಗೆ ಜಾಮೀನು: ಎಸ್.ಆರ್. ಹಿರೇಮಠ್ ಸ್ವಾಗತ

ಅಕ್ರಮ ಗಣಿಗಾರಿಕೆ ಸಂಬಂಧ ಮೂರು ವರ್ಷಕ್ಕೂ ಹೆಚ್ಚು ಕಾಲ ಜೈಲಿನಲ್ಲಿದ್ದ ಜನಾರ್ದನ ರೆಡ್ಡಿಗೆ ಸುಪ್ರೀಂಕೋರ್ಟ್ ಷರತ್ತು ಬದ್ಧ ಜಾಮೀನು ನೀಡಿರುವುದು ಸ್ವಾಗತಾರ್ಹ...
ಎಸ್.ಆರ್.ಹಿರೇಮಠ್
ಎಸ್.ಆರ್.ಹಿರೇಮಠ್

ಬೆಂಗಳೂರು: ಅಕ್ರಮ ಗಣಿಗಾರಿಕೆ ಸಂಬಂಧ ಮೂರು ವರ್ಷಕ್ಕೂ ಹೆಚ್ಚು ಕಾಲ ಜೈಲಿನಲ್ಲಿದ್ದ ಜನಾರ್ದನ ರೆಡ್ಡಿಗೆ ಸುಪ್ರೀಂಕೋರ್ಟ್ ಷರತ್ತು ಬದ್ಧ ಜಾಮೀನು ನೀಡಿರುವುದು ಸ್ವಾಗತಾರ್ಹ ಎಂದು ಜನ ಸಂಗ್ರಾಮ ಪರಿಷತ್ ಅಧ್ಯಕ್ಷ ಎಸ್.ಆರ್.ಹಿರೇಮಠ್ ತಿಳಿಸಿದರು.

ಕರ್ನಾಟಕದ ಬಳ್ಳಾರಿ ಜಿಲ್ಲೆಗೆ ಹಾಗೂ ಆಂಧ್ರ ಪ್ರದೇಶದ ಅನಂತಪುರ, ಕಡಪ ಜಿಲ್ಲೆಗಳಿಗೆ ರೆಡ್ಡಿ ಭೇಟಿ ನೀಡದಂತೆ ಸುಪ್ರೀಂ ಸೂಚಿಸಿರುವುದು ಕೋರ್ಟ್‌ಗಳ ಮೇಲಿನ ವಿಶ್ವಾಸಕ್ಕೆ ಕಾರಣವಾಗಿದೆ ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು. ಅಕ್ರಮ ಗಣಿಗಾರಿಕೆ ಸಂಬಂಧದ ಪ್ರಕರಣಗಳನ್ನು ಪ್ರತಿದಿನ ವಿಚಾರಣೆ ತೆಗೆದುಕೊಳ್ಳಬೇಕಾಗಿ ಸಮಾಜ ಪರಿವರ್ತನಾ ಸಮುದಾಯ ಸದ್ಯದಲ್ಲೇ ಸುಪ್ರೀಂಗೆ ಮನವಿ ಸಲ್ಲಿಸಲಿದೆ ಎಂದು ಹೇಳಿದರು.

ಸಮಾಜ ಪರಿವರ್ತನಾ ಸಮುದಾಯ ಹೂಡಿದ್ದ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆ ಫಲುಶ್ರುತಿಯಾಗಿ ದೇಶದಲ್ಲೇ ಅತಿಹೆಚ್ಚು ಅಕ್ರಮ ಗಣಿಗಾರಿಕೆಯಲ್ಲಿ ತೊಡಗಿದ್ದ ಜನಾರ್ದನ ರೆಡ್ಡಿ ಮೂರು ವರ್ಷ ಜೈಲಿನಲ್ಲಿ ಕಳೆಯಬೇಕಾಯಿತು ಹಾಗೂ ಮೂರು ಜಿಲ್ಲೆಗಳಲ್ಲಿ ಗಣಿಗಾರಿಕೆ ಸ್ಥಗಿತಗೊಳಿಸಬೇಕಾಯಿತು ಎಂದರು.

ಕ್ರಿಮಿನಲ್ ಪ್ರಕರಣ ದಾಖಲಿಸಿ: ತುರಹಳ್ಳಿ ಗುಡ್ಡ ಅರಣ್ಯ ಪ್ರದೇಶದಲ್ಲಿ ಮತ್ತು ಕಂದಾಯ ಭೂಮಿಯಲ್ಲಿ ಒತ್ತುವರಿ ಮಾಡಿರುವ ಆದಿಚುಂಚನಗಿರಿ ಮಠದ ವಿರುದ್ಧ ಸರ್ಕಾರ ಕ್ರಿಮಿನಲ್ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದು.

7.15 ಎಕರೆ ಅರಣ್ಯ ಪ್ರದೇಶ ಹಾಗೂ 16.15 ಎಕರೆ ಕಂದಾಯ ಜಮೀನನ್ನು ಆದಿಚುಂಚನಗಿರಿ ಮಠ ಒತ್ತುವರಿ ಮಾಡಿದೆ ಎಂದು ಆರೋಪಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com