
ಬೆಳಗಾವಿ: ತನಗೆ ನ್ಯಾಯ ಸಿಗುತ್ತಿಲ್ಲವೆಂದು ಲೈಂಗಿಕ ಕಿರುಕುಳ ಪ್ರಕರಣದ ಸಂತ್ರಸ್ತೆ ಗುರುವಾರ ಬೆಳಗಿನ ಜಾವ ಆತ್ಮಹತ್ಯೆಗೆ ಯತ್ನಿಸಿದ್ದಾರೆ.
ಹೆಸ್ಕಾಂ ಉದ್ಯೋಗಿಯಾಗಿರುವ ಸಂತ್ರಸ್ತೆ, ಹೆಸ್ಕಾಂ ಕಾರ್ಯನಿರ್ವಾಹಕ ಎಂಜಿನಿಯರ್ ಟಿ.ಬಿ.ಮಜ್ಜಗಿ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಪೊಲೀಸರಿಗೆ ಕೆಲ ತಿಂಗಳ ಹಿಂದೆ ದೂರು ನೀಡಿದ್ದರು. ತನಗಾದ ಅನ್ಯಾಯಕ್ಕೆ ಸರ್ಕಾರದಿಂದಾಗಲಿ ಅಥವಾ ಪೊಲೀಸರಿಂದಾಗಲಿ ನ್ಯಾಯ ಸಿಗುತ್ತಿಲ್ಲ ಎಂದು ಬೇಸತ್ತು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಇಲ್ಲಿನ ಶಿವಬಸವ ನಗರದ ಪಿಜಿಯಲ್ಲಿ ವಾಸವಿದ್ದ ಆಕೆ, `ನನ್ನ ಸಾವಿಗೆ ಹೆಸ್ಕಾಂ ಅಧಿಕಾರಿ ಮಜ್ಜಗಿಯೇ ಕಾರಣ' ಎಂದು ಡೆತ್‍ನೋಟ್ ಬರೆದಿಟ್ಟು ನಿದ್ದೆ ಮಾತ್ರೆಗಳನ್ನು ಸೇವಿಸಿದ್ದಾರೆ.
ಕೆಲ ಹೊತ್ತಿನಲ್ಲಿ ಹೊಟ್ಟೆನೋವಿನಿಂದ ಹೊರಳಾಡುತ್ತಿರುವುದನ್ನು ಗಮನಿಸಿದ ಪಿಜಿಯಲ್ಲಿದ್ದವರು ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ.
Advertisement