ಜಿಲ್ಲಾ ಸುದ್ದಿ

ಬ್ಯಾಟರಾಯನಪುರ ವಾಹನ ಸಂಚಾರಕ್ಕೆ ಪರ್ಯಾಯ ವ್ಯವಸ್ಥೆ

ಬ್ಯಾಟರಾಯನಪುರ ವಾಹನ ಸಂಚಾರಕ್ಕೆ ಪರ್ಯಾಯ ವ್ಯವಸ್ಥೆ
ಸಾಂದರ್ಭಿಕ ಚಿತ್ರ
Published On :

ಬೆಂಗಳೂರು: ಮೈಸೂರು ರಸ್ತೆ ಬ್ಯಾಟರಾಯನ ಪುರದಲ್ಲಿರುವ ಕರ್ನಾಟಕ ವಿದ್ಯುತ್ ಕಾರ್ಖಾನೆ ಬಳಿ ವೃಷಭಾವತಿ ಕಾಲುವೆಯ ಸೇತುವೆ ಕೆಡವಿ ನೂತನ ಸೇತುವೆ ನಿರ್ಮಿಸಲು ಬಿಬಿಎಂಪಿ ಮುಂದಾಗಿದ್ದು ಸಂಚಾರ ಪೊಲೀಸರು ಪರ್ಯಾಯ ಮಾರ್ಗ ಕಲ್ಪಿಸಿದ್ದಾರೆ.

ಫೆ.3ರಿಂದ ಕಾಮಗಾರಿ ಆರಂಭಗೊಳ್ಳಲಿದ್ದು ಮುಕ್ತಾಯವಾಗುವವರೆಗೂ ಪರ್ಯಾಯ ಮಾರ್ಗ ಚಾಲ್ತಿಯಲ್ಲಿರಲಿದೆ. ನೂತನ ಸೇತುವೆ ನಿರ್ಮಾಣವಾಗಲು 6 ತಿಂಗಳ ಕಾಲಾವಕಾಶ ಬೇಕು ಎನ್ನಲಾಗಿದೆ.

ಪರ್ಯಾಯ ವ್ಯವಸ್ಥೆ
ಮೈಸೂರು ಕಡೆಯಿಂದ ಸಿರ್ಸಿ ವೃತ್ತದ ಕಡೆಗೆ ಬರುವ ವಾಹನಗಳು ಕಿಂಕೋ ಜಂಕ್ಷನ್ ಬಳಿ ಎಡ ತಿರುವು ಪಡೆದು ದೀಪಾಂಜಲಿ ನಗರದ ಬಳಿ ಬಲ ತಿರುವು ಪಡೆದು ಹೊಸದಾಗಿ ನಿರ್ಮಿಸಿರುವ ಸೇತುವೆ ಮೂಲಕ ಬಾಪೂಜಿನಗರ ಜಂಕ್ಷನ್ ಬಳಿ ಮೈಸೂರು ರಸ್ತೆಯನ್ನು ಸೇರಿ ಮುಂದುವರಿಯಬೇಕು.

ವೆಸ್ಟ್ ಆಫ್ ಕಾರ್ಡ್ ರಸ್ತೆಯಲ್ಲಿ ವಿಜಯನಗರದ ಕಡೆಯಿಂದ ಮೈಸೂರು ರಸ್ತೆಯ ಕಡೆಗೆ ಸಂಚರಿಸುವ ವಾಹನಗಳು ದೀಪಾಂಜಲಿ ನಗರದ ಬಳಿ ಹೊಸದಾಗಿ ನಿರ್ಮಿಸಿರುವ ಸೇತುವೆಯ ಮೇಲೆ ಎಡ ತಿರುವು ಪಡೆದು ಬಾಪೂಜಿನಗರ ಜಂಕ್ಷನ್ ಬಳಿ ಮೈಸೂರು ರಸ್ತೆಯನ್ನು ಸೇರಿ ಸಂಚರಿಸಬಹುದಾಗಿದೆ.

ಹೊಸಕೆರೆ ಹಳ್ಳಿ, ಬ್ಯಾಟರಾಯನಪುರ, ಬನಶಂಕರಿ ಕಡೆಗೆ ಸಾಗುವ ವಾಹನಗಳು ಮೈಸೂರು ರಸ್ತೆ ಕೆಎಸ್‍ಆರ್‍ಟಿಸಿ ಜಂಕ್ಷನ್ ಬಳಿ `ಯು' ತಿರುವು ಪಡೆದು ಬೇಕಾದ ಮಾರ್ಗಗಳಲ್ಲಿ ಮುಂದುವರಿಯಬಹುದು. ಸ್ಯಾಟಲೈಟ್ ಬಸ್ ನಿಲ್ದಾಣದಿಂದ ಕಿಂಕೋ ಜಂಕ್ಷನ್ ಕಡೆಗೆ ಸಾಗುವ ವಾಹನಗಳ ಸಂಚಾರದಲ್ಲಿ ಬದಲಾವಣೆ ಇಲ್ಲ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.