
ಶಿವಮೊಗ್ಗ: ಕುಂಚೇನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಕೆ. ಜೆ. ನಾಗೇಶ್ ನಾಯಕ್ ಹಾಗೂ ಉಪಾಧ್ಯಕ್ಷರಾಗಿ ಚಂದ್ರಿಬಾಯಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನದ ಆಯ್ಕೆಗೆ ಇಂದು ಚುನಾವಣೆ ನಿಗದಿಯಾಗಿತ್ತು. ಆದರೆ ನಾಗೇಶ್ ನಾಯಕ್ ಹಾಗೂ ಚಂದ್ರಿಬಾಯಿ ಮಾತ್ರ ನಾಮಪತ್ರ ಸಲ್ಲಿಸಿದ್ದರು.ಹೀಗಾಗಿ ಈ ಇಬ್ಬರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಮಲ್ಲಿಕಾರ್ಜುನ ಚುನಾವಣಾಧಿಕಾರಿಯಾಗಿ ಕಾರ್ಯನಿರ್ವಹಿಸಿದರು. ಕುಂಚೇನಹಳ್ಳಿ ಗ್ರಾಮ ಪಂಚಾಯಿತಿಗೆ 9 ಮಂದಿ ಸದಸ್ಯರಿದ್ದಾರೆ.
ತಾವು ಅಧ್ಯಕ್ಷರಾಗಿ ಆಯ್ಕೆಯಾಗಲು ಸಹಕರಿಸಿದ ಎಲ್ಲರಿಗೂ ನಾಗೇಶ್ ನಾಯ್ಕ ಕೃತಜ್ಞತೆ ಸಲ್ಲಿಸಿದ್ದಾರೆ.
Advertisement