ಬೆಂಗಳೂರಿನಲ್ಲಿ ಹಾಡಹಗಲೇ ವ್ಯಾಪಾರಿ ಹತ್ಯೆ

ನೀರಿನ ಪೈಪ್ ಹಾಗೂ ಇತರ ಬಿಡಿಭಾಗಗಳ ಸರಬರಾಜು ಮಾಡುತ್ತಿದ್ದ ವ್ಯಾಪಾರಿಯನ್ನು ದುಷ್ಕರ್ಮಿಗಳು ಮಾರಾಕಾಸ್ತ್ರಗಳಿಂದ ಕೊಚ್ಚಿ ಕೊಲೆ...
ಶ್ರೀನಿವಾಸ
ಶ್ರೀನಿವಾಸ
Updated on

ಬೆಂಗಳೂರು: ನೀರಿನ ಪೈಪ್ ಹಾಗೂ ಇತರ ಬಿಡಿಭಾಗಗಳ ಸರಬರಾಜು ಮಾಡುತ್ತಿದ್ದ ವ್ಯಾಪಾರಿಯನ್ನು ದುಷ್ಕರ್ಮಿಗಳು ಮಾರಾಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಕೊಡಿಗೆಹಳ್ಳಿಯಲ್ಲಿ ಶುಕ್ರವಾರ ನಡೆದಿದೆ.

ಇಲ್ಲಿನ ಗಣೇಶನಗರ ನಿವಾಸಿ ಶ್ರೀನಿವಾಸ(35) ಕೊಲೆಯಾದ ವ್ಯಾಪಾರಿ. ಕೊಲೆಯಾದ ಶ್ರೀನಿವಾಸ, ಪತ್ನಿ ಶೋಭಾ ಹಾಗೂ ಮಗುವಿನೊಂದಿಗೆ ವಾಸವಿದ್ದರು.

ಶ್ರೀನಿವಾಸ್ ಶುಕ್ರವಾರ ಮಧ್ಯಾಹ್ನ 2.15ರ ಸುಮಾರಿಗೆ ಮಿಕ್ಸರ್ ರಿಪೇರಿ ಮಾಡಿಸಿಕೊಂಡು ಮನೆಗೆ ವಾಪಸಾಗುತ್ತಿದ್ದ. ಈ ವೇಳೆ ಅವರನ್ನು ಹಿಂಬಾಲಿಸಿಕೊಂಡು ಬಂದ ದುಷ್ಕರ್ಮಿಗಳು ಮನೆ ಸಮೀಪದಲ್ಲೇ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ.

ರಸ್ತೆಯಲ್ಲಿ ರಕ್ತದ ಮಡುವಿನಲ್ಲಿ ಬಿದ್ದಿದ್ದ ಶ್ರೀನಿವಾಸನನ್ನು ಕಂಡ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿ, ಬಳಿಕ ಆಸ್ಪತ್ರೆಗೆ ಸಾಗಿಸಿದ್ದಾರೆ. ಆದರೆ, ಮಾರ್ಗ ಮಧ್ಯೆದಲ್ಲೇ ಶ್ರೀನಿವಾಸ್ ಮೃತಪಟ್ಟಿದ್ದಾರೆ.

ಈ ಸಂಬಂಧ ಶ್ರೀನಿವಾಸ್ ಪತ್ನಿ ಶೋಭಾ ಕೊಡಿಗೆಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಕೌಟುಂಬಿಕ ವಿಚಾರವಾಗಿ ಶ್ರೀನಿವಾಸ್‌ಗೆ ಪರಿಚಯ ಇರುವವರೇ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.

ಈ ಬಗ್ಗೆ ಮಾಹಿತಿ ಸಂಗ್ರಹಿಸಲಾಗುತ್ತಿದೆ ಮತ್ತು ಆರೋಪಿಗಳ ಬಂಧನಕ್ಕೆ ಜಾಲ ಬೀಸಲಾಗಿದೆ ಎಂದು ಕೊಡಿಗೆಹಳ್ಳಿ ಪೊಲೀಸರು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com