ಕರ್ನಾಟಕ ಹೈಕೋರ್ಟ್
ಜಿಲ್ಲಾ ಸುದ್ದಿ
ರೈತರ ಆತ್ಮಹತ್ಯೆ: ಕೇಂದ್ರ, ರಾಜ್ಯಕ್ಕೆ ನೋಟಿಸು
ರಾಜ್ಯದಲ್ಲಿ ಹೆಚ್ಚುತ್ತಿರುವ ರೈತರ ಆತ್ಮಹತ್ಯೆ ಪ್ರಕರಣ ಇದೀಗ ಹೈಕೋರ್ಟ್ ಮೆಟ್ಟಿಲೇರಿದೆ...
ಬೆಂಗಳೂರು: ರಾಜ್ಯದಲ್ಲಿ ಹೆಚ್ಚುತ್ತಿರುವ ರೈತರ ಆತ್ಮಹತ್ಯೆ ಪ್ರಕರಣ ಇದೀಗ ಹೈಕೋರ್ಟ್ ಮೆಟ್ಟಿಲೇರಿದೆ.
ರೈತನ ಕಲ್ಯಾಣಕ್ಕಾಗಿ ಸರ್ಕಾರ ರೂಪಿಸಿರುವ ಯೋಜನೆ ಆತನಿಗೆ ತಲುಪುವಲ್ಲಿ ಎಷ್ಟರ ಮಟ್ಟಿಗೆ ಸಫಲವಾಗಿದೆ ಮತ್ತು ಯೋಜನೆಯ ಅನುಷ್ಠಾನ ಮಾಡಿರುವುದರ ಕುರಿತು ಸರ್ಕಾರ ಪರಿಶೋಧನೆ ನಡೆಸುವಂತೆ ಕೋರಿ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಹೈಕೋರ್ಟ್ ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಿಸಿತ್ತು.
ವಿಚಾರಣೆ ನಡೆಸಿದ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಎಸ್.ಕೆ.ಮುಖರ್ಜಿ ಮತ್ತು ನ್ಯಾಯಮೂರ್ತಿ ಬಿ.ವಿ.ನಾಗರತ್ನ ಅವರಿದ್ದ ವಿಭಾಗೀಯ ಪೀಠ, ಕೇಂದ್ರ ಹಾಗೂ ಸರ್ಕಾರಕ್ಕೆ ನೊಟೀಸು ಜಾರಿ ಮಾಡಿದೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ