
ಮೈಸೂರು: ಗಣಿ ಹಗರಣದಲ್ಲಿ ಜಾಮೀನು ಪಡೆದು ಜೈಲಿನಿಂದ ಬಿಡುಗಡೆಯಾಗಿರುವ ಮಾಜಿ ಸಚಿವ ಜಿ. ಜನಾರ್ದನ ರೆಡ್ಡಿ, ಸಂಸದ ಬಿ. ಶ್ರೀರಾಮುಲು ಅವರು ತಮ್ಮ ಕುಟುಂಬದ ಸದಸ್ಯರೊಂದಿಗೆ ಮೈಸೂರಿನ ಚಾಮುಂಡಿಬೆಟ್ಟಕ್ಕೆ ಶನಿವಾರ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.
ಚಾಮುಂಡಿಬೆಟ್ಟದ ಒಂದು ಸಾವಿರ ಮೆಟ್ಟಿಲುಗಳನ್ನು ಹತ್ತಿ ತಾಯಿ ಚಾಮುಂಡೇಶ್ವರಿ ದೇವಿ ದರ್ಶನ ಪಡೆದು, ವಿಶೇಷ ಪೂಜೆ ಸಲ್ಲಿಸಿದರು. ಈ ಹಿಂದೆ ಶ್ರೀರಾಮುಲು ಅವರು ಚಾಮುಂಡಿಬೆಟ್ಟದ ಮೆಟ್ಟಿಲುಗಳನ್ನು ಹತ್ತಿದ್ದರು.
ಇದೇ ಮೊದಲ ಬಾರಿಗೆ ತಮ್ಮ ಸ್ನೇಹಿತ ಜನಾರ್ದನ ರೆಡ್ಡಿ ಅವರೊಂದಿಗೆ ಮೆಟ್ಟಿಲು ಹತ್ತಿದ್ದು ವಿಶೇಷ. ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಸಂಸದ ಶ್ರೀರಾಮುಲು, ಮುಂದೆ ಒಳ್ಳೆಯ ದಿನಗಳು ಬರಲಿವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
Advertisement