ಅಕ್ರಮ ಮರಳು ಗಣಿಗಾರಿಕೆ: ಲಾರಿ, ಆರು ಕೊಪ್ಪರಿಕೆ ವಶ

ಅಕ್ರಮ ಮರಳು ಗಣಿಗಾರಿಕೆ ನಡೆಸುತ್ತಿದ್ದ ಕೇಂದ್ರದ ಮೇಲೆ ಅಧಿಕಾರಿಗಳು ಹಾಗೂ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಮರಳು ಗಣಿಗಾರಿಕೆಗೆ ಬಳಸುತ್ತಿದ್ದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.
ಅಕ್ರಮ ಮರಳು ಗಣಿಗಾರಿಕೆ(ಸಾಂಕೇತಿಕ ಚಿತ್ರ)
ಅಕ್ರಮ ಮರಳು ಗಣಿಗಾರಿಕೆ(ಸಾಂಕೇತಿಕ ಚಿತ್ರ)

ಮದ್ದೂರು: ಮದ್ದೂರುತಾಲೂಕಿನ ಕೊಳಗೆರೆ ಮತ್ತು ಬನ್ನಹಳ್ಳಿ ಗ್ರಾಮಗಳ ಶಿಂಷಾ ನದಿ ಪಾತ್ರದಲ್ಲಿ ಅಕ್ರಮ ಮರಳು ಗಣಿಗಾರಿಕೆ ನಡೆಸುತ್ತಿದ್ದ ಕೇಂದ್ರದ ಮೇಲೆ ಅಧಿಕಾರಿಗಳು ಹಾಗೂ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಮರಳು ಗಣಿಗಾರಿಕೆಗೆ ಬಳಸುತ್ತಿದ್ದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

ಮರಳು ಗಣಿಗಾರಿಕೆ ಬಗ್ಗೆ ತಮಗೆ ದೊರೆತ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿ ನಾಗಭೂಷಣ್, ವೃತ್ತ ನಿರೀಕ್ಷಕ ಕೆ.ಆರ್ ಪ್ರಸಾದ್ ಹಾಗೂ ಸಬ್ ಇನ್ಸ್ ಪೆಕ್ಟರ್ ವೆಂಕಟೇಗೌಡ ಹಾಗೂ ಸಿಬ್ಬಂದಿ ದಾಳಿ ನಡೆಸಿ 1 ಜೆಸಿಬಿ ಯಂತ್ರ 1 ಕ್ಯಾಂಟರ್, ಲಾರಿ ಹಾಗೂ 6 ಕೊಪ್ಪರಿಕೆಗಳನ್ನು ವಶಕ್ಕೆ ಪಡೆದಿದ್ದಾರೆ.

ಅಧಿಕಾರಿಗಳ ದಾಳಿ ಸಂದರ್ಭದಲ್ಲಿ ಶಿಂಷಾ ನದಿಯಲ್ಲಿ ಮರಳು ಗಣಿಗಾರಿಕೆಯಲ್ಲಿ ತೊಡಗಿದ್ದ ಹತ್ತಕ್ಕೂ ಹೆಚ್ಚು ಮಂಡಿ ಕೊಪ್ಪರಿಕೆಹಳನ್ನು ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದ್ದಾರೆ. ನಂತರ ಕಾರ್ಯಪ್ರವೃತ್ತರಾದ ಪೊಲೀಸರು ಕೊಳಗೆರೆ, ಬನ್ನಹಳ್ಳಿ ಇಗ್ಗಲೂರು ಹಾಗೂ ಅಣ್ಣಳ್ಳಿ ಗ್ರಾಮಗಳ ಶಿಂಷಾ ನದಿ ಪಾತ್ರದಲ್ಲಿ ಗಣಿಗಾರಿಕೆ ನಡೆಸುತ್ತಿದ್ದ ಮರಳನ್ನು ಸಾಗಿಸಲು ನಿರ್ಮಿಸಿದ್ದ ಜಾಡುಗಳನ್ನು ಪೊಲೀಸರು ನಾಶ ಪಡಿಸಿದ್ದಾರೆ.

ಮದ್ದೂರಿನ ವಿವಿಧ ಗ್ರಾಮಗಳ ಶಿಂಷಾ ನದಿ ಪಾತ್ರದಲ್ಲಿ ಕಳೆದ ಹಲವಾರು ತಿಂಗಳಿಂದ ಮರಳು ಗಣಿಗಾರಿಕೆ ಅವ್ಯಾಹತವಾಗಿ ನಡೆಯುತ್ತಿತ್ತು ಆದರೂ ಸಹಕಂದಾಯ ಹಾಗೂ ಪೊಲೀಸ್ ಅಧಿಕಾರಿಗಳು ಮರಳು ದಂಧೆಕೋರರೊಂದಿಗೆ ಶಾಮೀಲಾಗಿದ್ದ ಕಾರಣ ದಂಧೆ ನಿರಂತರವಾಗಿ ನಡೆಯುತ್ತಿತ್ತು. ಈ ಬಗ್ಗೆ ಸಾರ್ವಜನಿಕರು ದೂರು ನೀಡಿದ್ದರು. ನಂತರ ಜಿಲ್ಲಾಧಿಕಾರಿ ಅಜಯ್ ನಾಗಭೂಷಣ್ ಸೂಚನೆ ಮೇರೆಗೆ ಉಪವಿಭಾಗಾಧಿಕಾರಿ ಅರುಳ್ ಕುಮಾರ್,ಈಚೆಗೆ , ಮರಳು ಗಣಿಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ವರದಿ ನೀಡಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com