
ಬೆಂಗಳೂರು: ನಕಲಿ ದಾಖಲೆ ಸೃಷ್ಟಿಸಿ ಬಿಡಿಎ ನಿವೇಶನ ಕಬಳಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ಮಾಜಿ ಮೇಯರ್ ವೆಂಕಟೇಶಮೂರ್ತಿ ವಿರುದ್ಧ ಬೆಂಗಳೂರು ಮಹಾನಗರ ಕಾರ್ಯಪಡೆ(ಬಿಎಂಟಿಎಫ್) ಮಂಗಳವಾರ ಎಫ್‌ಐಆರ್ ದಾಖಲಿಸಿದೆ.
ಪದ್ಮನಾಭನಗರದಲ್ಲಿ ಅಕ್ರಮವಾಗಿ ನಿವೇಶನ ಕಬಳಿಸಿದ ಆರೋಪದ ಮೇಲೆ ವೆಂಕಟೇಶಮೂರ್ತಿ ಹಾಗೂ ಅವರ ಪತ್ನಿ ಕೆ.ಪ್ರಭಾ ಮತ್ತು ಇದಕ್ಕೆ ಸಹಕರಿಸಿದ ಕೆಲವು ಬಿಡಿಎ ಅಧಿಕಾರಿಗಳ ವಿರುದ್ಧ ಬಿಎಂಟಿಎಫ್ ಎಫ್‌ಐಆರ್ ದಾಖಲಿಸಿಕೊಂಡು, ತನಿಖೆ ಆರಂಭಿಸಿದೆ.
ಪದ್ಮನಾಭನಗರದ 7ನೇ ಕ್ರಾಸ್‌ನಲ್ಲಿ ಸಾರ್ವಜನಿಕ ಉದ್ದೇಶಕ್ಕಾಗಿ ಬಿಡಿಎ ಮೀಸಲಿಟ್ಟಿದ್ದ ನಿವೇಶನವನ್ನು ಮಾಜಿ ಮೇಯರ್ ವೆಂಕಟೇಶಮೂರ್ತಿ ಅವರು ನಕಲಿ ದಾಖಲೆಗಳನ್ನು ಸೃಷ್ಟಿಸಿ ಕಬಳಿಸಿದ್ದಾರೆ ಎಂದು ಆರೋಪಿಸಿ ಮುನಿಕೃಷ್ಣ ಎಂಬುವವರು ದೂರು ನೀಡಿದ್ದರು. ಈ ದೂರಿನ ಅನ್ವಯ ಈಗ ಬಿಎಂಟಿಎಫ್ ಎಫ್‌ಐಆರ್ ದಾಖಲಿಸಿದೆ.
Advertisement