

ಮಂಡ್ಯ: ಹಾಡುಹಗಲೇ ಮಹಿಳೆಯನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆಯಲ್ಲಿ ನಡೆದಿದೆ.
ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಕೋಣಸಾಲೆಯಲ್ಲಿ ಈ ಘಟನೆ ನಡೆದಿದೆ. ಗೃಹಿಣಿ ಸೋನಾ(36) ಎಂಬುವವರ ಮೇಲೆ ಕಲ್ಲು ಎತ್ತಿಹಾಕಿ ಬರ್ಬರವಾಗಿ ಕೊಲೆ ಮಾಡಲಾಗಿದೆ.
ದುಷ್ಕರ್ಮಿಗಳ ಗುಂಪೊಂದು ಕೋಣಸಾಲೆಯ ಕೆರೆ ಏರಿಯ ಮೇಲೆ ಸೋನಾ ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆಗೈದು ಸ್ಥಳದಿಂದ ಪರಾರಿಯಾಗಿದ್ದಾರೆ. ಬೆಸಗರಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಮೂಲಗಳು ತಿಳಿಸಿವೆ.