

ಬೆಂಗಳೂರು: ಚಲಿಸುತ್ತಿದ್ದ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ(ಬಿಎಂಟಿಸಿ)ಯ ಬಸ್‌ನಲ್ಲಿ ಪ್ರಯಾಣಿಕನೊಬ್ಬ ಮೃತಪಟ್ಟ ಘಟನೆ ಮಂಗಳವಾರ ನಡೆದಿದೆ.
ಮೆಜೆಸ್ಟಿಕ್‌ನಿಂದ ಎಲೆಕ್ಟ್ರಾನಿಕ್ ಸಿಟಿಗೆ ತೆರಳುತ್ತಿದ್ದ ಬಸ್‌ನಲ್ಲಿ 35 ವರ್ಷದ ವೆಂಕಟರಮಣ ಎಂಬುವವರು ಹೃದಯಾಘಾತದಿಂದ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ.
ಸೀಟ್‌ನಲ್ಲಿ ಕುಳಿತಿದ್ದ ವೆಂಕಟರಮಣ ಸಾವಿನ ಬಗ್ಗೆ ಸಹ ಪ್ರಯಾಣಿಕರು ಬಸ್‌ನ ನಿರ್ವಾಹಕ ಹಾಗೂ ಚಾಲಕನಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಚಾಲಕ ಬಸ್‌ನ್ನು ಮಡಿವಾಳ ಪೊಲೀಸ್ ಠಾಣೆಗೆ ತೆಗೆದುಕೊಂಡು ಹೋಗಿದ್ದಾರೆ.
ಪರಿಶೀಲನೆ ನಡೆಸಿದ ಪೊಲೀಸರು, ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ.