ವೃತ್ತಿಪರ ಕೋರ್ಸ್ ಗಳಿಗೆ ಸುಳ್ಳು ಪ್ರಮಾಣಪತ್ರ

ವೃತ್ತಿಪರ ಕೋರ್ಸ್ ಗಳಿಗೆ ಪ್ರವೇಶ ಪಡೆಯಲು ಸುಳ್ಳು ಪ್ರಮಾಣ ಪತ್ರ ನೀಡುವ ಕ್ರಮ ರಾಜ್ಯದಲ್ಲಿ ಅವ್ಯಾಹತವಾಗಿ ನಡೆಯುತ್ತಿದೆ ಎನ್ನಲಾಗಿದೆ...
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on

ಬೆಂಗಳೂರು: ವೃತ್ತಿಪರ ಕೋರ್ಸ್ ಗಳಿಗೆ ಪ್ರವೇಶ ಪಡೆಯಲು ಸುಳ್ಳು ಪ್ರಮಾಣ ಪತ್ರ ನೀಡುವ ಕ್ರಮ ರಾಜ್ಯದಲ್ಲಿ ಅವ್ಯಾಹತವಾಗಿ ನಡೆಯುತ್ತಿದೆ ಎನ್ನಲಾಗಿದೆ.

ಆರ್ಥಿಕವಾಗಿ ಹಿಂದುಳಿದವರು ಎಂದು ತೋರಿಸಿ ನಕಲಿ ಪ್ರಮಾಣಪತ್ರ ಸಲ್ಲಿಸಿ, ಕೆಲವು ವಿದ್ಯಾರ್ಥಿಗಳು ಇತರ ಹಿಂದುಳಿದ ವರ್ಗಗಳ ವಿಭಾಗದಲ್ಲಿ(ಒಬಿಸಿ ಕೋಟಾ) ಪ್ರವೇಶ ಪಡೆಯಲು ಯತ್ನಿಸುತ್ತಾರೆ ಎಂಬ ಆರೋಪಗಳು ಕೇಳಿಬರುತ್ತಿವೆ.

ಈ ಕುರಿತು ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ)ವನ್ನು ಸಂಪರ್ಕಿಸಿದಾಗ, ನಕಲಿ ಪ್ರಮಾಣಪತ್ರ ಸಲ್ಲಿಸುವುದು ನಮ್ಮ ರಾಜ್ಯದಲ್ಲಿ ಸಹ ಕಂಡುಬರುತ್ತಿದೆ, ಕೆಲವು ವಿದ್ಯಾರ್ಥಿಗಳ ಪೋಷಕರು ತಮ್ಮ ಮಕ್ಕಳಿಗೆ ಒಬಿಸಿ ಕೋಟಾದಲ್ಲಿ ಎಂಜಿನಿಯರಿಂಗ್ ಮತ್ತು ವೈದ್ಯಕೀಯ ಸೀಟು ಗಿಟ್ಟಿಸಿಕೊಳ್ಳಲು ಸುಳ್ಳು ಪ್ರಮಾಣಪತ್ರ ಕೊಡುತ್ತಾರೆ ಎಂದು ಹೇಳಿದೆ.

ಈ ವರ್ಷ ಒಬ್ಬ ಎಂಜಿನಿಯರಿಂಗ್ ಮತ್ತು ಓರ್ವ ವೈದ್ಯಕೀಯ ವಿದ್ಯಾರ್ಥಿಗಳ ಪೋಷಕರು ಉತ್ತಮ ಆರ್ಥಿಕ ಸ್ಥಿತಿಯಲ್ಲಿದ್ದರೂ ಸುಳ್ಳು ಪ್ರಮಾಣಪತ್ರ ನೀಡಿ ಶುಲ್ಕದಲ್ಲಿ ವಿನಾಯಿತಿ ಪಡೆದಿದ್ದಾರೆ. ಅವರ ಪೋಷಕರಿಗೆ ನಾವು ನೊಟೀಸು ಕಳುಹಿಸಿದ್ದೇವೆ. ಅಲ್ಲದೆ ಅವರ ಅಂಕಪಟ್ಟಿಗಳ ಪರಿಶೀಲನೆಗೆ ತಹಸೀಲ್ದಾರ್ ರಿಗೆ ಕಳುಹಿಸಿಕೊಡಲಾಗುವುದು ಎಂದು
ತಿಳಿಸಿದರು.

ಕಾನೂನು ಪ್ರಕಾರ ಪೋಷಕರ ವಾರ್ಷಿಕ ಆದಾಯವು 6 ಲಕ್ಷಕ್ಕಿಂತ ಕಡಿಮೆ ಇದ್ದರೆ ಮಾತ್ರ ವೃತ್ತಿಪರ ಕೋರ್ಸ್ ಗಳಿಗೆ ಸರ್ಕಾರಿ ಸೀಟು ಪಡೆಯಬಹುದಾಗಿದೆ.ಆದರೆ ಅಕ್ರಮದಿಂದ ನಿಜವಾದ ಫಲಾನುಭವಿ ವಿದ್ಯಾರ್ಥಿಗಳಿಗೆ ಸೀಟು ಶುಲ್ಕದಲ್ಲಿ ವಿನಾಯಿತಿ ಸಿಗುವುದಿಲ್ಲ. ಬೆಂಗಳೂರಿನಲ್ಲಿ ಬೇರೆ ಎಲ್ಲಾ ಜಿಲ್ಲೆಗಳಿಗಿಂತ ಹೆಚ್ಚು ನಕಲಿ ಪ್ರಮಾಣಪತ್ರಗಳು ಸಿಗುತ್ತವೆ ಎಂದು ಹೇಳಿದರು.

ಕರ್ನಾಟಕ ಪರೀಕ್ಷಾ ಪ್ರಾಧಿಕಾರದಲ್ಲಿ ದಾಖಲೆಗಳನ್ನು ಪರಿಶೀಲಿಸಲು ಯಾವುದೇ ಸಾಧನಗಳಿಲ್ಲ. ನಕಲಿ ಪ್ರಮಾಣಪತ್ರಗಳನ್ನು ಗುರುತಿಸುವ ತಂತ್ರಜ್ಞಾನವನ್ನು ಅಳವಡಿಸಿಕೊಡುವಂತೆ ರಾಷ್ಟ್ರೀಯ ಮಾಹಿತಿ ಕೇಂದ್ರವನ್ನು ಮನವಿ ಮಾಡಿಕೊಂಡಿದ್ದೇವೆ ಎಂದು ಗಂಗಾಧರಯ್ಯ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com