
ಬೆಂಗಳೂರು: ರಾಜ್ಯದಲ್ಲಿ ಹೆಚ್ಚುತ್ತಿರುವ ರೈತರ ಆತ್ಮಹತ್ಯೆ ಪ್ರಕರಣ ಹಿನ್ನೆಲೆಯಲ್ಲಿ ನೊಂದ ರೈತ ಕುಟುಂಬಗಳಿಗೆ ಸಾಂತ್ವನ ಹೇಳಲು ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ವಿಧಾನ
ಮಂಡಲದ ಅಧಿವೇಶನದ ಬಳಿಕ ಕರ್ನಾಟಕಕ್ಕೆ ಆಗಮಿಸುವ ಸಾಧ್ಯತೆ ಇದೆ.
ಕಾಂಗ್ರೆಸ್‍ನ ಉನ್ನತ ಮೂಲಗಳ ಪ್ರಕಾರ, ಇದಕ್ಕೆ ಪೂರಕವಾಗಿ ಎಐಸಿಸಿ ಕಾರ್ಯದರ್ಶಿ ಡಾ. ಚಲ್ಲ ಕುಮಾರ್ ಸೋಮವಾರ ಬೆಳಗ್ಗೆ ಬೆಂಗಳೂರಿಗೆ ಆಗಮಿಸಿದ್ದು, ರೈತರ ಆತ್ಮಹತ್ಯೆ ಪ್ರಕರಣ ಸಂಬಂಧ ಸರ್ಕಾರ ಮತ್ತು ಪಕ್ಷದಿಂದ ಪ್ರತ್ಯೇಕ ಮಾಹಿತಿ ಪಡೆದಿದ್ದಾರೆ. ಮೈಸೂರು, ಯಾದಗಿರಿ ಅಥವಾ ಮಂಡ್ಯ ಜಿಲ್ಲೆಗಳ ಪೈಕಿ ಒಂದು ಕಡೆ ಭೇಟಿ ನೀಡುವ ಸಾಧ್ಯತೆ ಇದೆ.
Advertisement