
ಬೆಂಗಳೂರು: ನಗರ ಪೊಲೀಸ್ ಆಯುಕ್ತ ಎಂ.ಎನ್.ರೆಡ್ಡಿ ಅವರ ವಿರುದ್ಧವೂ ಭ್ರಷ್ಟಾಚಾರ ಆರೋಪ ಕೇಳಿ ಬಂದಿದ್ದು, ಈ ಸಂಬಂಧ ಲೋಕಾಯುಕ್ತಕ್ಕೆ ದೂರು ನೀಡಲಾಗಿದೆ.
ಐಪಿಎಸ್ ಅಧಿಕಾರಿ, ಕರ್ನಾಟಕ ಪೊಲೀಸ್ ಗೃಹ ನಿರ್ಮಾಣ ನಿಗಮದ ಮುಖ್ಯಸ್ಥ ಸುಶಾಂತ್ ಮಹಾಪಾತ್ರ ಅವರು ಪೊಲೀಸ್ ಆಯುಕ್ತರ ವಿರುದ್ಧ ಲೋಕಾಯುಕ್ತಕ್ಕೆ ದೂರು ನೀಡಿದ್ದು, 2011ರಿಂದ 2013ರವರೆಗೆ ಎಂ.ಎನ್.ರೆಡ್ಡಿ ಅವರು ಪೊಲೀಸ್ ಗೃಹ ನಿಗಮದಲ್ಲಿ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ವೇಳೆ, ಗೃಹ ನಿರ್ಮಾಣ ಕಾಮಗಾರಿಗಳಿಗೆ ಗುತ್ತಿಗೆ ನೀಡುವಲ್ಲಿ ಭಾರಿ ಅವ್ಯವಹಾರ ನಡೆದಿದೆ ಎಂದು ಆರೋಪಿಸಿದ್ದಾರೆ.
ರೆಡ್ಡಿ ಅವರು 5 ಕೋಟಿ ರುಪಾಯಿ ಕಾಮಗಾರಿಗೆ ಮಾತ್ರ ಅನುಮತಿ ನೀಡಬೇಕಾಗಿತ್ತು. ಆದರೆ ಅವರು ಅಧಿಕಾರ ವ್ಯಾಪ್ತಿ ಮೀರಿ 50 ಕೋಟಿ ರುಪಾಯಿ ಮೊತ್ತದ ಕಾಮಗಾರಿಗೆ ಅನುಮತಿ ನೀಡಿದ್ದಾರೆ ಎಂದು ಮಹಾಪಾತ್ರ ತಮ್ಮ ದೂರಿನಲ್ಲಿ ಆರೋಪಿಸಿದ್ದಾರೆ.
ಎಂ.ಎನ್.ರೆಡ್ಡಿ ಅವರು ಸಿಬಿಐ ಬ್ಲಾಕ್ ಲಿಸ್ಟ್‌ನಲ್ಲಿದ್ದ ಪರ್ಲ್ಸ್ ಕನ್ಸ್‌ಟ್ರಕ್ಷನ್ ಕಂಪನಿಗೆ ಗುತ್ತಿಗೆ ನೀಡಿದ್ದಾರೆ. ಹೀಗಾಗಿ ಇದರಲ್ಲಿ ಭಾರಿ ಅವ್ಯವಹಾರ ನಡೆದಿರುವ ಸಾಧ್ಯತೆ ಇದ್ದು, ಈ ಬಗ್ಗೆ ತನಿಖೆ ನಡೆಸುವಂತೆ ಲೋಕಾಯುಕ್ತರಿಗೆ ದೂರು ಸಲ್ಲಿಸಿದ್ದೇನೆ ಎಂದು ಮಹಾಪಾತ್ರ ಅವರು ಮಾಧ್ಯಮಕ್ಕೆ ತಿಳಿಸಿದ್ದಾರೆ.
Advertisement