ಬೆಳ್ಳಂಬೆಳಗ್ಗೆ ಜವರಾಯನ ಅಟ್ಟಹಾಸ: ಮೂವರ ದುರ್ಮರಣ

ಬೆಳ್ಳಂಬೆಳಗ್ಗೆ ಜವರಾಯ ಅಟ್ಟಹಾಸ ಮೆರೆದಿದ್ದಾನೆ. ಹಾಸನ ಜಿಲ್ಲೆಯ ಅರಸಿಕೆರೆ ತಾಲೂಕಿನ ಬಾಣಾವರ ಗ್ರಾಮದ ಬಳಿ ಕಾರಿಗೆ ಲಾರಿ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಹಾಸನ: ಬೆಳ್ಳಂಬೆಳಗ್ಗೆ ಜವರಾಯ ಅಟ್ಟಹಾಸ ಮೆರೆದಿದ್ದಾನೆ. ಹಾಸನ ಜಿಲ್ಲೆಯ ಅರಸಿಕೆರೆ ತಾಲೂಕಿನ ಬಾಣಾವರ ಗ್ರಾಮದ ಬಳಿ ಕಾರಿಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಘಟನೆ ನಡೆದಿದೆ.
ನಾಗಮ್ಮ(36), ಶ್ರೀನಿವಾಸ್ (40) ಹಾಗೂ ರಾಜ(40) ಮೃತ ದುರ್ದೈವಿಗಳು. ಬೆಂಗಳೂರಿನಿಂದ ಕಡೂರು ಕಡೆಗೆ ತೆರಳುತ್ತಿದ್ದ ವೇಳೆ ಈ ದುರಂತ ಸಂಭವಿಸಿದೆ. ಈ ಸಂಬಂಧ ಬಾಣಾವಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com