

ಹಾಸನ: ಅಪ್ರಾಪ್ತೆಯನ್ನು ಅಪಹರಿಸಿದ ನಾಲ್ವರು ಕಾಮುಕರ ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ಹಾಸನ ಜಿಲ್ಲೆ ಆಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಜುಲೈ 7ರಂದು ನಾಲ್ವರು ಕಾಮುಕರು ಅಪ್ರಾಪ್ತೆಯನ್ನು ಅಪಹರಿಸಿದ್ದರು. ಬಳಿಕ ಆಕೆಯನ್ನು ಕತ್ತಲೆ ಕೋಣೆಯಲ್ಲಿ ಕೂಡಿ ಹಾಕಿದ್ದ ಕಿಡಿಗೇಡಿಗಳು ಆಕೆಯ ಮೇಲೆ ಸಾಮೂಹಿಕವಾಗಿ ಅತ್ಯಾಚಾರವೆಸಗಿದ್ದಾರೆ.
ಮಾಜಿ ಶಾಸಕ ಬಿ.ಡಿ ಬಸವರಾಜ್ ತೋಟದ ಮನೆಯಲ್ಲಿ ಕೂಡಿ ಹಾಕಿ, ನಾಲ್ಕು ದಿನ ನಿತ್ಯ ಅತ್ಯಾಚಾರವೆಸಗಿದ್ದು, ಬಳಿಕ ಆಕೆಯ ಮನೆ ಬಳಿ ತಂದುಬಿಟ್ಟಿದ್ದಾರೆ. ಈ ಬಗ್ಗೆ ಸಂತ್ರಸ್ತೆ ಬಾಲಕಿ ಆಲೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾಳೆ.
ಈ ಹಿನ್ನಲೆಯಲ್ಲಿ ಮಾಜಿ ಶಾಸಕ ಬಸವರಾಜ್ ಅವರ ತೋಟದ ಮನೆಯ ಮ್ಯಾನೇಜರ್ ಆಗಿದ್ದ ಲೋಕೇಶ್ ಅಲಿಯಾಸ್ ಬಾಬು ಎಂಬಾತನನ್ನು ಪೊಲೀಸರು ಬಂಧಿಸಿದ್ದು, ಉಳಿದ ಮೂವರು ಆರೋಪಿಗಳಿಗಾಗಿ ಶೋಧ ಮುಂದುವರೆಸಿದ್ದಾರೆ. ಇನ್ನೂ ಮೂವರು ಆರೋಪಿಗಳು ಅದೇ ತೋಟದಲ್ಲಿ ಕೆಲಸ ಮಾಡುವ ಕೂಲಿಗಳಾಗಿರುತ್ತಾರೆ ಎಂದು ಮೂಲಗಳು ತಿಳಿಸಿವೆ.