ಬಿಬಿಎಂಪಿ ಚುನಾವಣಾ ವೇಳಾಪಟ್ಟಿ ಪ್ರಕಟ: ಆಗಸ್ಟ್ 22ಕ್ಕೆ ಮತದಾನ, 25ಕ್ಕೆ ಫಲಿತಾಂಶ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ಚುನಾವಣೆಗೆ ಮತ್ತೊಮ್ಮೆ ಮುಹೂರ್ತ ಫಿಕ್ಸ್ ಆಗಿದ್ದು, ಆಗಸ್ಟ್ 22ರಂದು ಒಂದೇ....
ಬಿಬಿಎಂಪಿ
ಬಿಬಿಎಂಪಿ

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ಚುನಾವಣೆಗೆ ಮತ್ತೊಮ್ಮೆ ಮುಹೂರ್ತ ಫಿಕ್ಸ್ ಆಗಿದ್ದು, ಆಗಸ್ಟ್ 22ರಂದು ಒಂದೇ ಹಂತದಲ್ಲಿ ಎಲ್ಲಾ 198 ವಾರ್ಡ್‌ಗಳಿಗೆ ಮತದಾನ ನಡೆಯಲಿದೆ.

ಹೈಕೋರ್ಟ್ ಸೂಚನೆಯಂತೆ ರಾಜ್ಯ ಚುನಾವಣಾ ಆಯೋಗ ಇಂದು ಬಿಬಿಎಂಪಿ ಚುನಾವಣಾ ವೇಳಾಪಟ್ಟಿಯನ್ನು ಪ್ರಕಟಿಸಿದ್ದು, ಆಗಸ್ಟ್ 22ರಂದು ಒಂದೇ ಹಂತದಲ್ಲಿ ಎಲ್ಲಾ 198 ವಾರ್ಡ್‌ಗಳಿಗೆ ಮತದಾನ ನಡೆಯಲಿದೆ. ಆಗಸ್ಟ್ 25ಕ್ಕೆ ಫಲಿತಾಂಶ ಪ್ರಕಟವಾಗಲಿದೆ.

ಸುಪ್ರೀಂ ಕೋರ್ಟ್ ನೀಡಿರುವ ಅವಧಿಯ ಪ್ರಕಾರ ಆಯೋಗ ಆಗಸ್ಟ್ 28ರ ಒಳಗಾಗಿ ಚುನಾವಣೆ ನಡೆಸಬೇಕಿದ್ದು, ಇದನ್ನಾಧರಿಸಿ ಆಯೋಗ ಚುನಾವಣಾ ದಿನಾಂಕ ಪ್ರಕಟಿಸಿದೆ.

ಜುಲೈ 17ರಿಂದ ಚುನಾವಣಾ ನೀತಿ ಸಂಹಿತೆ ಜಾರಿಗೆ ಬರಲಿದ್ದು, ಆಗಸ್ಟ್ 3ರಂದು ಚುನಾವಣಾ ಅಧಿಸೂಚನೆ ಪ್ರಕಟಿಸಲಾಗುತ್ತಿದೆ.

ಆಗಸ್ಟ್ 10ರಂದು ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದ್ದು, ಆಗಸ್ಟ್ 11ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ ಮತ್ತು ನಾಮಪತ್ರ ವಾಪಸ್ ಪಡೆಯಲು ಆಗಸ್ಟ್ 13ರಂದು ಕೊನೆಯ ದಿನವಾಗಿದೆ. ಅಗತ್ಯವಿದ್ದಲ್ಲಿ ಆಗಸ್ಟ್ 24ರಂದು ಮರು ಮತದಾನ ನಡೆಸಲಾಗುವುದು ಎಂದು ಚುನಾವಣಾ ಆಯೋಗ ತಿಳಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com