ಲಂಚ ಸ್ವೀಕಾರ ಜಡ್ಜ್ ಬಂಧನ

ಕಳೆದ 2014ರ ಡಿಸೆಂಬರ್ ತಿಂಗಳಲ್ಲಿ ಲಂಚ ಪಡೆಯುತ್ತಿದ್ದ ಸಂದರ್ಭದಲ್ಲಿ ಹೈಕೋರ್ಟ್ ವಿಚಕ್ಷಣಾ ದಳಕ್ಕೆ ಸಿಕ್ಕಿ ಬಿದ್ದಿದ್ದ ಬಸವಕಲ್ಯಾಣದ ಅಂದಿನ...
ಜಡ್ಜ್(ಸಂಗ್ರಹ ಚಿತ್ರ)
ಜಡ್ಜ್(ಸಂಗ್ರಹ ಚಿತ್ರ)
Updated on: 

ಬೀದರ್: ಕಳೆದ 2014ರ ಡಿಸೆಂಬರ್ ತಿಂಗಳಲ್ಲಿ ಲಂಚ ಪಡೆಯುತ್ತಿದ್ದ ಸಂದರ್ಭದಲ್ಲಿ ಹೈಕೋರ್ಟ್ ವಿಚಕ್ಷಣಾ ದಳಕ್ಕೆ ಸಿಕ್ಕಿ ಬಿದ್ದಿದ್ದ ಬಸವಕಲ್ಯಾಣದ ಅಂದಿನ ಜೆಎಂಎಫ್ಸಿ ನ್ಯಾಯಾಲಯದ ನ್ಯಾಯಾಧೀಶ ಶರಣಪ್ಪ ಸಜ್ಜನ್ ಅವರನ್ನು ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ.

ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ತೀರ್ಪು ನೀಡಲು ಲಂಚ ಕೇಳಿದ್ದಾರೆಂದು ಕಕ್ಷಿದಾರರೊಬ್ಬರು ದೂರು ನೀಡಿದ್ದರ ಹಿನ್ನೆಲೆಯಲ್ಲಿ ಹೈಕೋರ್ಟ್ ವಿಚಕ್ಷಣಾ ದಳ ನ್ಯಾ. ಶರಣಪ್ಪ ಅವರನ್ನು ನಿನ್ನೆ ಸಂಜೆ ಬಂಧಿಸಿದ್ದಾರೆ.

ರಾಯಚೂರು ಜಿಲ್ಲೆಯ ಸಿಂಧನೂರಿನ ಅವರ ಮನೆಯಲ್ಲಿ ಬಂಧಿಸಿದ್ದಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುದೀರಕುಮಾರ ರೆಡ್ಡಿ ತಿಳಿಸಿದ್ದಾರೆ. ಇವರು ಸೇರಿದಂತೆ ಇತರೆ ಮೂವರು ವಿರುದ್ಧ ಇದೇ ಜನವರಿ 1 ರಂದು ಎಫ್ಐಆರ್ ದಾಖಲಾಗಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com